Nehemiah 5:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರಿಂದ ಕಿತ್ತುಕೊಂಡ ಹೊಲಗದ್ದೆಗಳನ್ನು, ದ್ರಾಕ್ಷಾತೋಟ, ಎಣ್ಣೆಮರಗಳ ತೋಟ ಮತ್ತು ಅವರ ಮನೆಗಳನ್ನು ಅವರಿಗೆ ಈಗಲೇ ಹಿಂದಕ್ಕೆ ಕೊಡಿರಿ. ಅವರಿಂದ ವಸೂಲಿ ಮಾಡಿದ ಬಡ್ಡಿಯನ್ನು ಹಿಂದಕ್ಕೆ ಕೊಡಿರಿ. ನೀವು ಯಾವ ಯಾವದಕ್ಕೆ ಬಡ್ಡಿ ವಸೂಲಿ ಮಾಡಿರುವಿರೋ ಎಲ್ಲವನ್ನು ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಹೊಲ, ದ್ರಾಕ್ಷಿತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ನೂರಕ್ಕೆ ಒಂದರಂತೆ ನೀವು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಈ ಹೊತ್ತೇ ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು.
Kannada BSI Bible 2016
ದಯಮಾಡಿ ಈ ಬಡ್ಡಿಯನ್ನು ಬಿಟ್ಟು ಬಿಡೋಣ. ನೀವು ಅವರಿಂದ ಒತ್ತಾಯದಿಂದ ತೆಗೆದುಕೊಂಡ ಅವರ ಹೊಲಗಳನ್ನೂ ದ್ರಾಕ್ಷಾತೋಟಗಳನ್ನೂ ಇಪ್ಪೇ ತೋಪುಗಳನ್ನೂ ಮನೆಗಳನ್ನೂ ನೂರಕ್ಕೆ ಒಂದಾದ ಹಣವನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೇಯನ್ನೂ ಇಂದು ಅವರಿಗೆ ತಿರಿಗಿಕೊಡಿರಿ ಎಂದು ಹೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಹೊಲ, ದ್ರಾಕ್ಷೇತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ಶೇಕಡಾ ಇಷ್ಟೆಂದು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಈಹೊತ್ತೇ ಹಿಂದಕ್ಕೆ ಕೊಡಿರಿ ಎಂದು ಹೇಳಿದೆನು.
Kannada Bible (KNCL) BSI 2016
ಅವರ ಹೊಲ, ದ್ರಾಕ್ಷೀತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನು ಹಿಂದಕ್ಕೆ ಕೊಟ್ಟುಬಿಡಿ. ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೆ ಶೇಕಡಾ ಇಷ್ಟೆಂದು ವಸೂಲಿಮಾಡುವ ಹಕ್ಕನ್ನೂ ಕೂಡ ದಯವಿಟ್ಟು ಈ ದಿನವೇ ರದ್ದುಗೊಳಿಸಿ,” ಎಂದು ಹೇಳಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಹೊಲ, ದ್ರಾಕ್ಷಿತೋಟ, ಓಲಿವ್ ಎಣ್ಣೆಮರಗಳ ತೋಪು, ಮನೆ ಇವುಗಳನ್ನು ಹಿಂದಕ್ಕೆ ಕೊಟ್ಟು ಬಿಡಿ; ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೆ ಶೇಕಡಾ ಇಷ್ಟೆಂದು ವಸೂಲಿ ಮಾಡುವ ಹಕ್ಕನ್ನೂ ಕೂಡ ದಯವಿಟ್ಟು ಈ ದಿನವೇ ರದ್ದುಗೊಳಿಸಿ,” ಎಂದು ಹೇಳಿದೆ.