Nehemiah 5:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಶ್ರೀಮಂತರೂ ಅಧಿಕಾರಿಗಳೂ, “ನಾವು ಹಿಂದಕ್ಕೆ ಕೊಡುತ್ತೇವೆ. ಅವರಿಂದ ನಾವು ಹೆಚ್ಚೇನೂ ಕೇಳುವುದಿಲ್ಲ. ನೆಹೆಮೀಯನೇ, ನೀನು ಹೇಳಿದಂತೆಯೇ ನಾವು ಮಾಡುತ್ತೇವೆ” ಎಂದರು. ಆಗ ನಾನು ದೇವರ ಮುಂದೆ ಅವರಿಂದ ಪ್ರತಿಜ್ಞೆ ಮಾಡಿಸಲು ಯಾಜಕರನ್ನು ಕರೆದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವರು, “ನಾವು ಅವರಿಂದ ತೆಗೆದುಕೊಂಡದ್ದನ್ನು ಹಿಂದಕ್ಕೆ ಕೊಡುತ್ತೇವೆ, ಅವರಿಂದ ಏನೂ ಕೇಳುವುದಿಲ್ಲ, ನೀನು ಹೇಳಿದಂತೆಯೇ ಮಾಡುತ್ತೇವೆ” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಸಿ ಈ ಮಾತಿನಂತೆ ನಡೆಯುವುದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.
Kannada BSI Bible 2016
ಅದಕ್ಕವರುನಾವು ತಿರಿಗಿ ಕೊಡುತ್ತೇವೆ; ಅವರಿಂದ ಏನೂ ಕೇಳು ವದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ ಅಂದರು. ಆಗ ನಾನು ಯಾಜಕರನ್ನು ಕರೆದು ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತಕ್ಕೊಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು - ಹಿಂದಕ್ಕೆ ಕೊಡುತ್ತೇವೆ; ಅವರಿಂದ ಏನೂ ಕೇಳುವದಿಲ್ಲ. ನೀನು ಹೇಳಿದಂತೆಯೇ ಮಾಡುತ್ತೇವೆ ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರಿಸಿ ಈ ಮಾತಿನಂತೆ ನಡೆಯುವದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.
Kannada Bible (KNCL) BSI 2016
ಅವರು, “ಹಿಂದಕ್ಕೆ ಕೊಡುತ್ತೇವೆ; ಅವರಿಂದ ಏನೂ ಕೇಳುವುದಿಲ್ಲ. ನೀವು ಹೇಳಿದಂತೆಯೇ, ಮಾಡುತ್ತೇವೆ,” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಯಿಸಿದೆ; ಯಾಜಕರ ಮುಂದೆ, ತಾವು ಕೊಟ್ಟ ಮಾತಿನಂತೆ ನಡೆಯುವುದಾಗಿ ಪ್ರಮಾಣ ಮಾಡಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವರು, “ನಾವು ಹಿಂದಕ್ಕೆ ಕೊಡುತ್ತೇವೆ. ಅವರಿಂದ ಏನೂ ಕೇಳುವುದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ,” ಎಂದರು. ಆಗ ನಾನು ಯಾಜಕರನ್ನು ಕರೆದು, ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತೆಗೆದುಕೊಂಡೆನು.