Nehemiah 5:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ ಪ್ರಾಂತ್ಯಕ್ಕೆ ನನ್ನನ್ನು ರಾಜ್ಯಪಾಲನಾಗಿ ನೇಮಿಸಿದಂದಿನಿಂದ, ನಾನಾಗಲಿ ನನ್ನ ಸಹೋದರರಾಗಲಿ ರಾಜ್ಯಪಾಲರಿಗಾಗಿ ಪ್ರತ್ಯೇಕಿಸಿದ ಆಹಾರವನ್ನು ತಿನ್ನಲಿಲ್ಲ; ನನಗಾಗಿ ಆಹಾರವನ್ನು ಕೊಂಡುಕೊಳ್ಳಲು ಜನರಿಂದ ತೆರಿಗೆ ವಸೂಲಿಮಾಡಲಿಲ್ಲ. ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆ ವರ್ಷದ ತನಕ ನಾನು ರಾಜ್ಯಪಾಲನಾಗಿದ್ದೆನು. ಹೀಗೆ ಹನ್ನೆರಡು ವರ್ಷ ಯೆಹೂದದ ರಾಜ್ಯಪಾಲನಾಗಿದ್ದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಅರ್ತಷಸ್ತನು ನನ್ನನ್ನು ಯೆಹೂದ ದೇಶದ ಅಧಿಪತಿಯನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳ ವರೆಗೆ ಅಂದರೆ ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ ನಾನಾಗಲಿ ನನ್ನ ಸಹೋದರರಾಗಲಿ ದೇಶಾಧಿಪತಿಗೆ ಸಲ್ಲತಕ್ಕ ಭತ್ಯದಿಂದ ಜೀವನಮಾಡಲಿಲ್ಲ.
Kannada BSI Bible 2016
ಇದಲ್ಲದೆ ನಾನು ಯೆಹೂದ ದೇಶದಲ್ಲಿ ಅವರ ಅಧಿಪತಿಯಾಗಿದ್ದ ಕಾಲ ಮೊದಲುಗೊಂಡು ಅರಸ ನಾದ ಆರ್ತಷಸ್ತನ ಇಪ್ಪತ್ತನೇ ವರುಷ ಮೊದಲು ಗೊಂಡು ಮೂವತ್ತೆರಡನೇ ವರುಷದ ವರೆಗೆ ಹನ್ನೆರಡು ವರುಷವಾಗಿ ನಾನೂ ನನ್ನ ಸಹೋದರರೂ ಅಧಿ ಪತಿಯಾದವನ ರೊಟ್ಟಿಯನ್ನು ತಿನ್ನಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಅರ್ತಷಸ್ತನು ನನ್ನನ್ನು ಯೆಹೂದ ದೇಶದ ಅಧಿಪತಿಯನ್ನಾಗಿ ನೇವಿುಸಿದಂದಿನಿಂದ ಹನ್ನೆರಡು ವರುಷಗಳವರೆಗೆ ಅಂದರೆ ಅವನ ಆಳಿಕೆಯ ಇಪ್ಪತ್ತನೆಯ ವರುಷದಿಂದ ಮೂವತ್ತೆರಡನೆಯ ವರುಷದವರೆಗೆ ನಾನಾಗಲಿ ನನ್ನ ಸಹೋದರರಾಗಲಿ ದೇಶಾಧಿಪತಿಗೆ ಸಲ್ಲತಕ್ಕ ಆಯದಿಂದ ಜೀವನಮಾಡಲಿಲ್ಲ.
Kannada Bible (KNCL) BSI 2016
ಅರಸ ಅರ್ತಷಸ್ತನು ನನ್ನನ್ನು ಜುದೇಯ ನಾಡಿನ ರಾಜ್ಯಪಾಲನನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳವರೆಗೆ ಅಂದರೆ, ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ, ನಾನಾಗಲಿ, ನನ್ನ ಸಹೋದರರಾಗಲಿ ರಾಜ್ಯಪಾಲನೆಗೆ ಸಲ್ಲ ತಕ್ಕ ಭತ್ಯದಿಂದ ಜೀವನ ಮಾಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಾನು ಯೆಹೂದ ದೇಶದಲ್ಲಿ ಅವರ ರಾಜ್ಯಪಾಲನಾದ ಕಾಲ ಮೊದಲ್ಗೊಂಡು ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರ್ಷ ಮೊದಲ್ಗೊಂಡು ಮೂವತ್ತೆರಡನೆಯ ವರ್ಷದವರೆಗೆ ಹನ್ನೆರಡು ವರ್ಷವಾಗಿ ನಾನೂ, ನನ್ನ ಸಹೋದರರೂ ರಾಜ್ಯಪಾಲನಿಗೆ ಸಲ್ಲತಕ್ಕ ಆಹಾರವನ್ನು ತಿನ್ನಲಿಲ್ಲ.