Nehemiah 5:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಷ್ಚೇ ಅಲ್ಲದೆ ಯಾವಾಗಲೂ ನೂರೈವತ್ತು ಮಂದಿ ಯೆಹೂದ್ಯರಿಗೆ ನನ್ನ ಮೇಜಿನ ಮೇಲೆ ಊಟಕ್ಕೆ ಬಡಿಸುತ್ತಿದ್ದೆನು. ನಮ್ಮ ಸುತ್ತಲಿನ ಪ್ರಾಂತ್ಯಗಳಿಂದ ಬಂದ ಜನರೂ ನಮ್ಮೊಂದಿಗೆ ಊಟಮಾಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯೆಹೂದ್ಯರಲ್ಲಿ ನೂರೈವತ್ತು ಮಂದಿ ಅಧಿಕಾರಿಗಳೂ ಸುತ್ತಣ ಜನಾಂಗಗಳ ಮಧ್ಯದಿಂದ ನಮ್ಮ ಬಳಿಗೆ ಬರುತ್ತಿದ್ದವರೂ ನನ್ನ ಪಂಕ್ತಿಯಲ್ಲಿ ಊಟಮಾಡುತ್ತಿದ್ದರು.
Kannada BSI Bible 2016
ನಮ್ಮ ಸುತ್ತಲೂ ಇರುವ ಜನಾಂಗಗಳಿಂದ ಬಂದವರ ಹೊರ ತು ಯೆಹೂದ್ಯರೂ ಅಧಿಕಾರಸ್ಥರೂ ನೂರ ಐವತ್ತು ಮಂದಿ ನನ್ನ ಮೇಜಿಗೆ ಸೇರುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯೆಹೂದ್ಯರಲ್ಲಿ ನೂರೈವತ್ತು ಮಂದಿ ಅಧಿಕಾರಿಗಳೂ ಸುತ್ತಣ ಜನಾಂಗಗಳ ಮಧ್ಯದಿಂದ ನಮ್ಮ ಬಳಿಗೆ ಬರುತ್ತಿದ್ದವರೂ ನನ್ನ ಪಂಕ್ತಿಯಲ್ಲಿ ಊಟಮಾಡುತ್ತಿದ್ದರು.
Kannada Bible (KNCL) BSI 2016
ಇದಲ್ಲದೆ, ಯೆಹೂದ್ಯರಲ್ಲಿ ನೂರೈವತ್ತುಮಂದಿ ಅಧಿಕಾರಿಗಳು ಹಾಗು ಸುತ್ತಣ ಜನಾಂಗಗಳ ಮಧ್ಯೆ ಇಂದ ನಮ್ಮ ಬಳಿಗೆ ಬರುತ್ತಿದ್ದವರು ನನ್ನ ಪಂಕ್ತಿಯಲ್ಲೇ ಊಟಮಾಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಸುತ್ತಲೂ ಇರುವ ಜನಾಂಗಗಳಿಂದ ಬಂದವರೂ, ಯೆಹೂದ್ಯರೂ, ಅಧಿಕಾರಿಗಳೂ ನೂರ ಐವತ್ತು ಮಂದಿ ನನ್ನ ಪಂಕ್ತಿಯಲ್ಲೇ ಊಟಮಾಡುತ್ತಿದ್ದರು.