Nehemiah 5:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲವರು ಹೀಗಂದರು: “ನಮ್ಮ ಮನೆಯಲ್ಲಿ ಬಹಳ ಮಕ್ಕಳಿದ್ದಾರೆ. ನಮಗೆ ಊಟಮಾಡಲು ಸಾಕಷ್ಟು ದವಸಧಾನ್ಯವಿಲ್ಲ; ಹೀಗಿರಲು ನಾವು ಜೀವಂತವಾಗಿ ಉಳಿಯುವ ಸಾಧ್ಯತೆಯಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಕೆಲವರು, “ನಾವೂ ನಮ್ಮ ಗಂಡು ಹೆಣ್ಣು ಮಕ್ಕಳೂ ಬಹು ಮಂದಿ ಇದ್ದೇವೆ; ನಮ್ಮ ಜೀವನಕ್ಕಾಗಿ ಧಾನ್ಯವು ಬೇಕಾಗಿದೆ” ಎಂದು ಹೇಳಿದರು.
Kannada BSI Bible 2016
ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಲವರು - ನಾವೂ ನಮ್ಮ ಗಂಡುಹೆಣ್ಣು ಮಕ್ಕಳೂ ಬಹುಮಂದಿ ಇದ್ದೇವೆ; ನಮ್ಮ ಜೀವನಕ್ಕಾಗಿ ಕಾಳುಕಡ್ಡಿಗಳನ್ನು ಹೇಗಾದರೂ ಸಂಪಾದಿಸಿಕೊಳ್ಳೋಣ;
Kannada Bible (KNCL) BSI 2016
ಕೆಲವರು, “ನಮಗೆ ಗಂಡುಹೆಣ್ಣು ಮಕ್ಕಳು ಬಹುಮಂದಿ ಇದ್ದಾರೆ; ನಮ್ಮ ಜೀವನಕ್ಕಾಗಿ ಕಾಳುಕಡ್ಡಿಗಳನ್ನು ಹೇಗಾದರೂ ಸಂಪಾದಿಸಿಕೊಳ್ಳಬೇಕಾಗಿ ಇದೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಲ್ಲಿ ಕೆಲವರು, “ನಾವೂ, ನಮ್ಮ ಪುತ್ರರೂ, ನಮ್ಮ ಪುತ್ರಿಯರೂ ಅನೇಕರಾದುದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತೆಗೆದುಕೊಳ್ಳೋಣ,” ಎಂದರು.