Nehemiah 5:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇನ್ನೂ ಕೆಲವರು, “ನಮ್ಮ ಹೊಲಗದ್ದೆಗಳ ಮೇಲೆ ಅರಸನಿಗೆ ತೆರಿಗೆ ಕೊಡಬೇಕಾಗಿದೆ. ಆದರೆ ಕೊಡಲು ನಮ್ಮಲ್ಲಿ ಏನೂ ಇಲ್ಲ. ಬೇರೆಯವರಿಂದ ಎರವಲು ಪಡೆದುಕೊಂಡು ಕೊಡಬೇಕಾಗಿದೆ” ಅಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಕೆಲವರು, “ಅರಸನ ಸರ್ಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಾವು ನಮ್ಮ ಹೊಲ ದ್ರಾಕ್ಷಿತೋಟಗಳ ಮೇಲೆ ಹಣವನ್ನು ಸಾಲವಾಗಿ ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದರು.
Kannada BSI Bible 2016
ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಕೆಲವರು - ಸರಕಾರಕ್ಕೆ ಕಂದಾಯಕೊಡುವದಕ್ಕಾಗಿ ನಾವು ನಮ್ಮ ಹೊಲ ತೋಟಗಳ ಮೇಲೆ ಸಾಲ ತೆಗೆದುಕೊಳ್ಳಬೇಕಾಯಿತು;
Kannada Bible (KNCL) BSI 2016
ಮತ್ತೆ ಕೆಲವರು “ಸರಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಮ್ಮ ಹೊಲ, ತೋಟಗಳ ಮೇಲೆ ಸಾಲ ತೆಗೆದುಕೊಳ್ಳಬೇಕಾಯಿತು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನು ಕೆಲವರು, “ಅರಸನಿಗೆ ತೆರಿಗೆಯನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ, ನಮ್ಮ ದ್ರಾಕ್ಷಿತೋಟಗಳ ಮೇಲೆಯೂ ಸಾಲವನ್ನು ತೆಗೆದುಕೊಳ್ಳಬೇಕಾಯಿತು.