Nehemiah 5:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಕೋಪವು ಶಾಂತವಾದ ಬಳಿಕ ಧನಿಕರ ಮತ್ತು ಅಧಿಕಾರಿಗಳ ಬಳಿಗೆ ಹೋಗಿ, “ನೀವು ನಿಮ್ಮ ಸ್ವಂತ ಜನರಿಗೆ ಕೊಟ್ಟಿರುವ ಸಾಲಕ್ಕೆ ಬಡ್ಡಿಯನ್ನು ಕೊಡಲು ಬಲವಂತ ಮಾಡುತ್ತಿದ್ದೀರಿ. ನೀವು ಕೂಡಲೇ ಅದನ್ನು ನಿಲ್ಲಿಸಬೇಕು” ಎಂದೆನು. ಅನಂತರ ನಾನು ಎಲ್ಲಾ ಜನರನ್ನು ಒಟ್ಟುಗೂಡಿಸಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಮನಸ್ಸಿನಲ್ಲಿ ಸ್ವಲ್ಪ ಆಲೋಚಿಸಿಕೊಂಡು ಶ್ರೀಮಂತರಿಗೂ, ಅಧಿಕಾರಿಗಳಿಗೂ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದೆಂದರೇನು” ಎಂದು ಹೇಳಿ ಮಹಾಸಭೆಯನ್ನು ಕೂಡಿಸಿ
Kannada BSI Bible 2016
ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ತುಸು ಆಲೋಚಿಸಿಕೊಂಡು ಶ್ರೀಮಂತರಿಗೂ ಅಧಿಕಾರಿಗಳಿಗೂ - ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವದೆಂದರೇನು ಎಂದು ಹೇಳಿ ಅವರೊಡನೆ ಬಹಳವಾಗಿ ಹೆಣಗಾಡಿ ಅವರಿಗೆ ವಿರೋಧವಾಗಿ ಮಹಾಸಭೆಯನ್ನು ಕೂಡಿಸಿ -
Kannada Bible (KNCL) BSI 2016
ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೀಮಂತರನ್ನೂ ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೆ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ ಅವರಿಗೆ ವಿರೋಧವಾಗಿ ಮಹಾಸಭೆಯನ್ನು ಕೂಡಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೇಷ್ಠರನ್ನೂ, ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೇ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ, ಅವರಿಗೆ ವಿರೋಧವಾಗಿ ಮಹಾ ಸಭೆಯನ್ನು ಕೂಡಿಸಿದೆ.