Nehemiah 5:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಮ್ಮ ಯೆಹೂದಿ ಜನರನ್ನು ಪರದೇಶಗಳಲ್ಲಿ ಗುಲಾಮರನ್ನಾಗಿ ಮಾರಿದ್ದರು. ಅಂಥವರನ್ನು ನಾವು ಕ್ರಯಕೊಟ್ಟು ಕೊಂಡುಕೊಂಡು ಅವರನ್ನು ಗುಲಾಮತನದಿಂದ ಬಿಡುಗಡೆ ಮಾಡಿಸಿದೆವು. ಆದರೆ ನೀವು ಈಗ ಮತ್ತೆ ಗುಲಾಮರನ್ನಾಗಿ ಮಾಡುತ್ತಿದ್ದೀರಿ” ಎಂದೆನು. ಸೇರಿಬಂದಿದ್ದ ಶ್ರೀಮಂತರೂ ಅಧಿಕಾರಿಗಳೂ ಸುಮ್ಮನೆ ಬಾಯಿ ಮುಚ್ಚಿಕೊಂಡರು. ಅವರಿಗೆ ಏನೂ ಹೇಳಲಿಕ್ಕೂ ಆಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಗೆ, “ನಾವು ನಮ್ಮಿಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣ ಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತಿದ್ದೀರಿ; ಈಗ ಅವರನ್ನು ನಾವು ಕೊಂಡುಕೊಳ್ಳಬೇಕೇನು” ಎನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.
Kannada BSI Bible 2016
ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ನವ್ಮಿುಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು ಅನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.
Kannada Bible (KNCL) BSI 2016
“ನಾವು ನಮ್ಮಿಂದ ಆಗುವಷ್ಟು ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲಾದವರನ್ನು, ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎನ್ನಲು ಅವರು ಉತ್ತರಕೊಡದೆ ಸುಮ್ಮನೆ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇತರ ಜನರಿಗೆ ಗುಲಾಮರಾಗಿ ಮಾರಟವಾಗಿರುವ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿಯಿದ್ದಷ್ಟು ಬಿಡಿಸುತ್ತಿದ್ದೆವು. ಆದರೆ ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ. ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎಂದೆನು. ಆಗ ಅವರು ಹೇಳಲು ಏನೂ ಸಿಗದ ಕಾರಣ ಅವರು ಮೌನವಾಗಿದ್ದರು.