Nehemiah 5:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಹೇಳುವುದನ್ನು ಮುಂದುವರಿಸುತ್ತಾ, “ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ದೇವರಿಗೆ ಭಯಪಟ್ಟು ಆತನನ್ನು ಗೌರವಿಸಬೇಕೆಂದು ನಿಮಗೆ ಗೊತ್ತಿದೆ. ಇತರ ಜನರು ಮಾಡುವ ನಾಚಿಕೆಕರವಾದ ಕೆಲಸವನ್ನು ನೀವು ಮಾಡಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆನಂತರ ನಾನು ಅವರಿಗೆ, “ನೀವು ಮಾಡುತ್ತಿರುವುದು ಒಳ್ಳೆಯ ಕಾರ್ಯವಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.
Kannada BSI Bible 2016
ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ನಾನು ಅವರಿಗೆ - ನೀವು ಮಾಡಿದ್ದು ಒಳ್ಳೇದಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.
Kannada Bible (KNCL) BSI 2016
ಆಮೇಲೆ ನಾನು ಅವರಿಗೆ, “ನೀವು ಮಾಡಿದ್ದು ಸರಿಯಲ್ಲ; ನಾವು ನಮ್ಮ ವಿರೋಧಿಗಳಾದ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವರಿಗೆ, “ನೀವು ಮಾಡುವುದು ಒಳ್ಳೆಯದಲ್ಲ. ಇತರ ದೇಶದವರಾದ ನಮ್ಮ ಶತ್ರುಗಳ ನಿಂದೆಗೆ ಗುರಿಯಾಗದಂತೆ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲವೇ.