Nehemiah 6:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸನ್ಬಲ್ಲಟನಿಗೆ, ಟೋಬೀಯನಿಗೆ ಮತ್ತು ಅರಬಿಯವನಾದ ಗೆಷೆಮನಿಗೆ ಮತ್ತು ಇನ್ನಿತರ ವೈರಿಗಳಿಗೆ ನಾವು ಗೋಡೆಯನ್ನು ಕಟ್ಟಿ ಮುಗಿಸಿದ್ದು ಗೊತ್ತಾಯಿತು. ಗೋಡೆಯಲ್ಲಿದ್ದ ಎಲ್ಲಾ ಕಿಂಡಿಗಳನ್ನು ನಾವು ಮುಚ್ಚಿದೆವು. ಆದರೆ ಗೋಡೆಯಲ್ಲಿನ ದ್ವಾರಗಳಿಗೆ ಇನ್ನೂ ಬಾಗಿಲುಗಳನ್ನು ಇಟ್ಟಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಪೌಳಿಗೋಡೆಯನ್ನು ಪುನಃ ಕಟ್ಟಿಸಿದೆನು, ಆದರೆ ಹೆಬ್ಬಾಗಿಲುಗಳನ್ನೂ ಇನ್ನೂ ಇಡಿಸಿರಲಿಲ್ಲ. ಜೀರ್ಣೋದ್ಧಾರದ ಕಾರ್ಯಗಳೆಲ್ಲವೂ ಪೂರ್ಣವಾಯಿತೆಂಬುದು ಸನ್ಬಲ್ಲಟ್, ಟೋಬೀಯ, ಅರಬಿಯನಾದ ಗೆಷೆಮ್ ಇವರಿಗೂ, ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು.
Kannada BSI Bible 2016
ನಾನು ಕದಗಳನ್ನು ಬಾಗಲುದ್ವಾರಗಳಲ್ಲಿ ನಿಲ್ಲಿಸುವದಕ್ಕಿಂತ ಮುಂಚೆ ಗೋಡೆಯನ್ನು ಕಟ್ಟಿಸಿದೆನೆಂದೂ ಅದರಲ್ಲಿ ಒಂದು ಸಂದೂ ಬಿಡಲ್ಪಡ ಲಿಲ್ಲವೆಂದೂ ಸನ್ಬಲ್ಲಟನೂ ಟೋಬೀಯನೂ ಅರಬ್ಯ ನಾದ ಗೆಷೆಮನೂ ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಗೋಡೆಯನ್ನು ಕಟ್ಟಿಸಿ ತೀರಿಸಿ ಬಾಗಲುಗಳಿಗೆ ಕದಗಳನ್ನು ಇನ್ನೂ ಹಚ್ಚಿಸದಿದ್ದರೂ ಎಲ್ಲಾ ಸಂದುಗಳನ್ನು ಕೂಡಿಸಿದ ಸಂಗತಿಯು ಸನ್ಬಲ್ಲಟ್, ಟೋಬೀಯ, ಅರಬಿಯನಾದ ಗೆಷೆಮ್ ಇವರಿಗೂ
Kannada Bible (KNCL) BSI 2016
ನಾನು ಗೋಡೆಯನ್ನು ಕಟ್ಟಿ ಮುಗಿಸಿ ಬಾಗಿಲುಗಳಿಗೆ ಕದಗಳನ್ನು ಇನ್ನೂ ಹಚ್ಚಿಸಿರಲಿಲ್ಲ. ಗೋಡೆಯ ಸಂದುಗೊಂದುಗಳನ್ನು ಕೂಡಿಸಿದ ಸಂಗತಿ ಸನ್ಬಲ್ಲಟ್, ಟೋಬೀಯ ಹಾಗು ಅರೇಬಿಯನಾದ ಗೆಷಮ್ ಇವರಿಗೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಹೆಬ್ಬಾಗಿಲುಗಳಲ್ಲಿ ಬಾಗಿಲುಗಳನ್ನು ಇಡುವುದಕ್ಕಿಂತ ಮುಂಚೆ ನಾನು ಗೋಡೆಯಲ್ಲಿ ಒಂದು ಸಂದನ್ನೂ ಬಿಡದೆ ಪುನಃ ಕಟ್ಟಿದೆನೆಂದು ಸನ್ಬಲ್ಲಟನೂ, ಟೋಬೀಯನೂ, ಅರಬಿಯನಾದ ಗೆಷೆಮನೂ, ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ,