Nehemiah 6:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದು ದಿನ ನಾನು ದೆಲಾಯನ ಮಗನಾದ ಶೆಮಾಯನ ಮನೆಗೆ ಹೋದೆನು. ದೆಲಾಯನು ಮೆಹೇಟಬೇಲನ ಮಗ. ಆಗ ಶೆಮಾಯನು ಮನೆಯಲ್ಲಿದ್ದನು. ಅವನು, “ನೆಹೆಮೀಯನೇ, ನಾವು ದೇವಾಲಯದಲ್ಲಿ ಭೇಟಿಯಾಗೋಣ. ನಾವು ಅದರ ಒಳಗೆ ಹೋಗಿ ಕದಗಳನ್ನು ಮುಚ್ಚಿಕೊಳ್ಳೋಣ. ಯಾಕೆಂದರೆ ನಿನ್ನನ್ನು ಕೊಲ್ಲಲು ಈ ರಾತ್ರಿ ಜನರು ಬರುತ್ತಾರೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆನಂತರ ನಾನು ಮೆಹೇಟಬೇಲನ ಮೊಮ್ಮಗನೂ, ದೆಲಾಯನ ಮಗನೂ ಆದ ಶೆಮಾಯನ ಮನೆಗೆ ಹೋದೆನು. ಅವನು ಅಲ್ಲಿ ಅಡಗಿಕೊಂಡಿದ್ದನು. ಅವನು ನನಗೆ, “ನಿನ್ನನ್ನು ಕೊಲ್ಲುವುದಕ್ಕೆ ಈ ರಾತ್ರಿಯೇ ಬರುತ್ತಾರೆ. ಆದುದರಿಂದ ನಾವಿಬ್ಬರೂ ದೇವಾಲಯಕ್ಕೆ ಹೋಗಿ ಗರ್ಭಗುಡಿ ಪ್ರವೇಶಿಸಿ ಅದರ ಕದಗಳನ್ನು ಮುಚ್ಚಿಕೊಳ್ಳೋಣ ಬಾ” ಎಂದು ಹೇಳಿದನು.
Kannada BSI Bible 2016
ಆದದರಿಂದ ಈಗ ಓ ದೇವರೇ, ನನ್ನ ಕೈಗಳನ್ನು ಬಲಪಡಿಸು ಅಂದೆನು. ತರುವಾಯ ನಾನು ಅಡಗಿ ಕೊಂಡಿದ್ದ ಮೆಹೇಟಬೇಲನ ಮಗನಾದ ದೆಲಾಯನ ಮಗನಾದ ಶೆಮಾಯನ ಮನೆಗೆ ಬಂದೆನು. ಅವನುನಿನ್ನನ್ನು ಕೊಂದುಹಾಕಲು ಬರುತ್ತಾರೆ. ಹೌದು, ರಾತ್ರಿಯಲ್ಲಿ ನಿನ್ನನ್ನು ಕೊಂದು ಹಾಕಲು ಬರುತ್ತಾರೆ ಆದದರಿಂದ ನಾವಿಬ್ಬರೂ ದೇವರ ಆಲಯದಲ್ಲಿ ಪ್ರವೇಶಿಸಿ ಮಂದಿರದ ಬಾಗಲುಗಳನ್ನು ಮುಚ್ಚೊಣ ಬಾ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ದಿವಸ ನಾನು ಮೆಹೇಟಬೇಲನ ಮೊಮ್ಮಗನೂ ದೆಲಾಯನ ಮಗನೂ ಆದ ಶೆಮಾಯನ ಮನೆಗೆ ಹೋದೆನು. ಅವನು ಅಲ್ಲಿ ಅಡಗಿಕೊಂಡಿದ್ದನು. ಅವನು ನನಗೆ - ನಿನ್ನನ್ನು ಕೊಲ್ಲುವದಕ್ಕೆ ಬರುತ್ತಾರೆ, ಈ ರಾತ್ರಿಯೇ ಬರುತ್ತಾರೆ. ಆದದರಿಂದ ನಾವಿಬ್ಬರೂ ದೇವಾಲಯಕ್ಕೆ ಹೋಗಿ ಪವಿತ್ರಸ್ಥಾನವನ್ನು ಪ್ರವೇಶಿಸಿ ಅದರ ಕದಗಳನ್ನು ಮುಚ್ಚಿಕೊಳ್ಳೋಣ ಬಾ ಎಂದು ಹೇಳಿದನು.
Kannada Bible (KNCL) BSI 2016
ಒಂದು ದಿನ ನಾನು ಮೆಹೇಟಬೇಲನ ಮೊಮ್ಮಗನೂ ದೆಲಾಯನ ಮಗನೂ ಆದ ಶೆಮಾಯನ ಮನೆಗೆ ಹೋದೆ. ಅವನು ಅಲ್ಲಿ ಅವಿತುಕೊಂಡಿದ್ದನು. ಅವನು ನನಗೆ, “ನಿನ್ನನ್ನು ಕೊಲ್ಲುವುದಕ್ಕೆ ಬರುತ್ತಾರೆ; ಈ ರಾತ್ರಿಯೇ ಬರುತ್ತಾರೆ! ಆದುದರಿಂದ ನಾವಿಬ್ಬರೂ ದೇವಾಲಯಕ್ಕೆ ಹೋಗಿ ಗರ್ಭಗುಡಿಯನ್ನು ಸೇರಿ ಅದರ ಕದಗಳನ್ನು ಮುಚ್ಚಿಕೊಳ್ಳೋಣ ಬಾ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ನಾನು ಅಡಗಿಕೊಂಡಿದ್ದ ಮೆಹೇಟಬೇಲನ ಮಗನಾದ ದೆಲಾಯ, ಇವನ ಮಗನಾದ ಶೆಮಾಯನ ಮನೆಗೆ ಬಂದೆನು. ಅವನು, “ನಾವಿಬ್ಬರೂ ದೇವರ ಆಲಯದಲ್ಲಿ ಪವಿತ್ರಸ್ಥಾನದೊಳಗೆ ಹೋಗಿ, ಮಂದಿರದ ಬಾಗಿಲನ್ನು ಮುಚ್ಚಿಕೊಳ್ಳೋಣ ಬಾ, ಏಕೆಂದರೆ ಈ ರಾತ್ರಿಯೇ ನಿನ್ನನ್ನು ಕೊಂದುಹಾಕಲು ಬರುತ್ತಾರೆ,” ಎಂದು ಹೇಳಿದನು.