Nehemiah 6:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾನು ಶೆಮಾಯನಿಗೆ, “ನನ್ನಂಥ ಪುರುಷನು ಓಡಿಹೋಗಬೇಕೆ? ನನ್ನಂಥ ಸಾಮಾನ್ಯ ವ್ಯಕ್ತಿ ದೇವಾಲಯಕ್ಕೆ ಹೋಗಿ ಅವಿತುಕೊಳ್ಳಬಾರದು. ನಾನು ಬರುವುದಿಲ್ಲ” ಎಂದು ಹೇಳಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು, “ನನ್ನಂಥ ಪುರುಷನು ಓಡಿಹೋಗುವುದು ಯೋಗ್ಯವೋ? ಇದಲ್ಲದೆ, ನನ್ನಂಥವನು ಪ್ರಾಣರಕ್ಷಣೆಗಾಗಿ ಗರ್ಭಗುಡಿ ಪ್ರವೇಶಿಸಬಹುದೇ? ನಾನು ಬರುವುದಿಲ್ಲ” ಎಂದು ಉತ್ತರಕೊಟ್ಟೆನು.
Kannada BSI Bible 2016
ಅದಕ್ಕೆ ನಾನು--ನನ್ನಂಥಾ ಮನು ಷ್ಯನು ಓಡಿಹೋಗುವನೋ? ನನ್ನಂಥವನು ಬದುಕ ಬೇಕೆಂದು ಮಂದಿರದೊಳಕ್ಕೆ ಹೋಗುವವನಾರು? ನಾನು ಒಳಗೆ ಹೋಗುವದಿಲ್ಲ ಅಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು - ನನ್ನಂಥ ಪುರುಷನು ಓಡಿಹೋಗುವದು ಯೋಗ್ಯವೋ? ಇದಲ್ಲದೆ ನನ್ನಂಥವನು ಪ್ರಾಣ ರಕ್ಷಣೆಗಾಗಿ ಪವಿತ್ರಸ್ಥಾನವನ್ನು ಪ್ರವೇಶಿಸುವನೇ? ನಾನು ಬರುವದಿಲ್ಲ ಎಂದು ಉತ್ತರಕೊಟ್ಟೆನು.
Kannada Bible (KNCL) BSI 2016
ಅದಕ್ಕೆ ನಾನು, “ನನ್ನಂಥ ಗಂಡು ಓಡಿಹೋಗಿ ಅವಿತುಕೊಳ್ಳುವುದು ಸರಿಯೇ? ಇದಲ್ಲದೆ ಪ್ರಾಣರಕ್ಷಣೆಗಾಗಿ ಗರ್ಭಗುಡಿಯನ್ನು ನಾನು ಪ್ರವೇಶಿಸಬಹುದೇ? ಇಲ್ಲ, ನಾನು ಬರುವುದಿಲ್ಲ,” ಎಂದು ಉತ್ತರಕೊಟ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ನಾನು, “ನನ್ನಂಥಾ ಮನುಷ್ಯನು ಓಡಿ ಹೋಗುವನೋ? ನನ್ನಂಥವನು ಬದುಕಬೇಕೆಂದು ದೇವರ ಆಲಯದೊಳಗೆ ಹೋಗಬಹುದೇ? ನಾನು ಒಳಗೆ ಹೋಗುವುದಿಲ್ಲ,” ಎಂದೆನು.