Nehemiah 6:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಟೋಬೀಯನೂ ಅವರಿಗೆ ಉತ್ತರಿಸುತ್ತಿದ್ದನು. ಅವರು ಆ ಪತ್ರಗಳನ್ನು ಕಳುಹಿಸಲು ಕಾರಣವೇನೆಂದರೆ ಯೆಹೂದ್ಯರಲ್ಲಿ ಅನೇಕ ಜನರು ಅವನಿಗೆ ನಂಬಿಗಸ್ತರಾಗಿರುವುದಾಗಿ ವಾಗ್ದಾನ ಮಾಡಿದ್ದರು. ಟೋಬೀಯನು ಆರಹನ ಮಗನಾದ ಶೆಕನ್ಯನ ಅಳಿಯನಾಗಿದ್ದುದೇ ಇದಕ್ಕೆ ಕಾರಣ. ಟೋಬೀಯನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳೊಂದಿಗೆ ಲಗ್ನವಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಅವನು ಆರಹನ ಮಗನಾದ ಶೆಕನ್ಯನ ಅಳಿಯನಾಗಿದ್ದ ಹಾಗೂ ಅವನ ಮಗನಾದ ಯೆಹೋಹಾನಾನನೆಂಬ ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ಮದುವೆ ಮಾಡಿಕೊಂಡಿದ್ದನು. ಆದುದರಿಂದ ಯೆಹೂದ್ಯರಲ್ಲಿ ಅನೇಕರು ಅವನೊಂದಿಗೆ ಪ್ರಮಾಣ ಮಾಡಿ ಅವರಿಗೆ ವಶವಾಗಿದ್ದರು.
Kannada BSI Bible 2016
ಯಾಕಂದರೆ ಅವನು ಅರಾಹನ ಮಗನಾದ ಶೆಕೆನ್ಯನ ಅಳಿಯನಾದದ ರಿಂದಲೂ ಅವನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ತಕ್ಕೊಂಡದ್ದರಿಂದಲೂ ಯೆಹೂದದಲ್ಲಿ ಅನೇಕರು ಅವನಿಗೆ ಪ್ರಮಾಣಮಾಡಿದರು.ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀ ಯನು ನನ್ನನ್ನು ಭಯಪಡಿಸುವದಕ್ಕೆ ಪತ್ರಗಳನ್ನು ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಅವನು ಆರಹನ ಮಗನಾದ ಶೆಕನ್ಯನ ಅಳಿಯನೂ ಯೆಹೋಹಾನಾನನೆಂಬ ಅವನ ಮಗನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ಮದುವೆಮಾಡಿಕೊಂಡವನೂ ಆಗಿದ್ದದರಿಂದ ಯೆಹೂದ್ಯರಲ್ಲಿ ಅನೇಕರು ಅವನಿಗೆ ಪ್ರಮಾಣಮಾಡಿ ವಶರಾಗಿದ್ದರು.
Kannada Bible (KNCL) BSI 2016
ಏಕೆಂದರೆ ಅವನು ಆರಹನ ಮಗ ಶೆಕನ್ಯನ ಅಳಿಯನಾಗಿದ್ದ ಹಾಗು ಯೆಹೋಹಾನಾನನೆಂಬ ಅವನ ಮಗ ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ಮದುವೆಮಾಡಿಕೊಂಡಿದ್ದ. ಆದ್ದರಿಂದ ಯೆಹೂದ್ಯರಲ್ಲಿ ಅನೇಕರು ಅವನಿಗೆ ಪ್ರಮಾಣಮಾಡಿ ಅವನ ಪಕ್ಷದವರಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅವನು ಆರಹನ ಮಗ ಶೆಕನ್ಯನ ಅಳಿಯನಾದುದರಿಂದ ಅವನ ಮಗ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ತೆಗೆದುಕೊಂಡಿದ್ದರಿಂದಲೂ ಯೆಹೂದದಲ್ಲಿ ಅನೇಕರು ಅವನಿಗೆ ನಂಬಿಗಸ್ತರಾಗಿರುವುದಾಗಿ ಪ್ರಮಾಣ ಮಾಡಿದರು.