Nehemiah 6:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಅವರಿಗೆ ಸೇವಕರ ಮುಖಾಂತರ ಈ ಉತ್ತರವನ್ನು ಕಳುಹಿಸಿದೆನು: “ನಾನು ಬಹಳ ವಿಶೇಷವಾದ ಕೆಲಸ ಮಾಡಿಸುತ್ತಿದ್ದೇನೆ. ಆದ್ದರಿಂದ ನನಗೆ ಬರಲು ಸಾಧ್ಯವಿಲ್ಲ. ನನ್ನ ಬರುವಿಕೆಯಿಂದಾಗಿ ಈ ಕೆಲಸವು ನಿಂತು ಹೋಗಬಾರದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು ದೂತರ ಮುಖಾಂತರವಾಗಿ ಅವರಿಗೆ, “ನನಗೆ ಒಂದು ದೊಡ್ಡ ಕೆಲಸವುಂಟು; ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಆ ಕೆಲಸವು ನಿಂತು ಹೋಗುವುದು; ನಾನು ಬರಲು ಸಾಧ್ಯವಿಲ್ಲ” ಎಂದು ಹೇಳಿ ಕಳುಹಿಸಿದೆನು.
Kannada BSI Bible 2016
ಆದ ಕಾರಣ ನಾನು ಅವರ ಬಳಿಗೆ ಸೇವಕರನ್ನೂ ಕಳು ಹಿಸಿ--ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ; ಬರಲಾರೆನು; ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬರುವಲ್ಲಿ ಆ ಕೆಲಸ ಯಾಕೆ ನಿಂತು ಹೋಗ ಬೇಕು ಎಂದು ಹೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನನಗೆ ಕೇಡು ಬಗೆಯುವವರು ಎಂದು ತಿಳಿದು ನಾನು ದೂತರ ಮುಖಾಂತರವಾಗಿ ಅವರಿಗೆ - ನನಗೆ ದೊಡ್ಡ ಜಂಬರವುಂಟು; ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಕೆಲಸವು ನಿಂತುಹೋಗುವದು; ನಾನು ಬರಲಾರೆನು ಎಂದು ಹೇಳಿಸಿದೆನು.
Kannada Bible (KNCL) BSI 2016
ನಾನು ದೂತರ ಮುಖಾಂತರ ಅವರಿಗೆ, “ನನಗೆ ಮುಖ್ಯವಾದ ಕಾರ್ಯವಿದೆ; ಅದನ್ನು ಬಿಟ್ಟು ಬಂದರೆ ಕೆಲಸ ನಿಂತುಹೋಗುತ್ತದೆ; ನಾನು ಬರಲಾಗದು,” ಎಂದು ಹೇಳಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ನಾನು ಅವರ ಬಳಿಗೆ ದೂತರನ್ನು ಕಳುಹಿಸಿ, “ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ, ಬರಲಾರೆನು. ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಕೆಲಸವು ನಿಂತುಹೋಗುವುದು,” ಎಂದು ಹೇಳಿದೆನು.