Nehemiah 6:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಆ ಕಾಗದವನ್ನು ಹಾಗೆಯೇ ಹಿಂದಕ್ಕೆ ಕಳುಹಿಸಿದೆನು. ಅಲ್ಲದೆ, “ನೀನು ಹೇಳುವಂಥದ್ದೇನೂ ಆಗಲಿಲ್ಲ. ಇದು ಕೇವಲ ನಿನ್ನ ಊಹೆಯಷ್ಟೇ!” ಎಂದು ಹೇಳಿ ಕಳುಹಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ನಾನು, “ನೀನು ಬರೆದಿರುವಂಥ ವಿಚಾರಗಳು ಯಾವುದು ಇಲ್ಲಿ ನಡೆದಿರುವುದಿಲ್ಲ; ಅದನ್ನು ನೀನೇ ನಿನ್ನ ಮನಸ್ಸಿನಲ್ಲಿ ಕಲ್ಪಿಸಿಕೊಂಡಿರುವೆ” ಎಂದು ಹೇಳಿ ಕಳುಹಿಸಿದೆನು.
Kannada BSI Bible 2016
ಆಗ ನಾನು--ನೀನು ಹೇಳಿದ ಕಾರ್ಯಗಳಲ್ಲಿ ಯಾವದೂ ಮಾಡಿದ್ದಿಲ್ಲ. ನೀನು ಅವುಗಳನ್ನು ನಿನ್ನ ಸ್ವಂತ ಹೃದಯದಲ್ಲಿ ಕಲ್ಪಿಸುತ್ತಾ ಇದ್ದೀ ಎಂದು ಹೇಳಿಕಳುಹಿಸಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ - ನೀನು ಬರೆದಂಥದು ಏನೂ ನಡೆದಿಲ್ಲ; ಅದನ್ನು ನೀನೇ ನಿನ್ನ ಮನಸ್ಸಿನಲ್ಲಿ ಕಲ್ಪಿಸಿಕೊಂಡಿದ್ದಿ ಎಂದು ಹೇಳಿ ಕಳುಹಿಸಿದೆನು.
Kannada Bible (KNCL) BSI 2016
ಅದಕ್ಕೆ ನಾನು, “ನೀನು ಬರೆದಂಥದ್ದು ಏನೂ ನಡೆದಿಲ್ಲ; ಅದನ್ನು ನೀನೆ ನಿನ್ನ ಮನಸ್ಸಿನಲ್ಲಿ ಕಲ್ಪಿಸಿಕೊಂಡಿರುವೆ,” ಎಂದು ಹೇಳಿಕಳುಹಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು, “ನೀನು ಹೇಳಿದ ಕಾರ್ಯಗಳಲ್ಲಿ ಯಾವುದೂ ಮಾಡಿದ್ದಿಲ್ಲ. ನೀವು ಅವುಗಳನ್ನು ನಿನ್ನ ಸ್ವಂತ ಹೃದಯದಲ್ಲಿ ಕಲ್ಪಿಸಿಕೊಂಡಿರುವೆ,” ಎಂದು ಹೇಳಿ ಕಳುಹಿಸಿದೆನು.