Nehemiah 6:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಹೆದರಿಹೋಗಬೇಕೆಂದು ನಮ್ಮ ವೈರಿಗಳ ಕುತಂತ್ರವಿದೆ. “ಯೆಹೂದ್ಯರು ಭಯಗೊಂಡು ಬಲಹೀನರಾಗುವುದರಿಂದ ಅವರ ಕೆಲಸವನ್ನು ಮುಂದುವರಿಸಲು ಆಗುವುದಿಲ್ಲ, ಗೋಡೆಯೂ ಪೂರ್ಣಗೊಳ್ಳುವುದಿಲ್ಲ” ಎಂದು ಅವರು ಯೋಚಿಸಿಕೊಂಡಿದ್ದಾರೆ. ಆದರೆ ನಾನು, “ದೇವರೇ, ನನ್ನನ್ನು ಬಲಗೊಳಿಸು” ಎಂದು ಪ್ರಾರ್ಥಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಎಲ್ಲರೂ, “ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ಮುಗಿಸದೆ ಇರಲಿ” ಎಂದು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ಆದರೆ ನನ್ನ ದೇವರೇ, ನನ್ನ ಕೈಗಳನ್ನು ಬಲಗೊಳಿಸಿ ನನ್ನನ್ನು ಧೈರ್ಯಪಡಿಸು ಎಂದು ಪ್ರಾರ್ಥಿಸಿದೆನು
Kannada BSI Bible 2016
ಯಾಕಂದರೆ--ಅದು ಆಗದ ಹಾಗೆ ಆ ಕೆಲಸ ಬಿಟ್ಟುಬಿಟ್ಟು ಅವರ ಕೈಗಳು ಬಲಹೀನವಾಗುವವು ಅಂದುಕೊಂಡು ಅವರೆಲ್ಲರೂ ನಮ್ಮನ್ನು ಭಯಪಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಎಲ್ಲರೂ - ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ತೀರಿಸದೆ ಬಿಡಲಿ ಅಂದುಕೊಂಡು ನಮ್ಮನ್ನು ಹೆದರಿಸುವದಕ್ಕೆ ಪ್ರಯತ್ನಿಸಿದರು. [ನನ್ನ ದೇವರೇ,] ನನ್ನ ಕೈಗಳನ್ನು ಬಲಪಡಿಸು.
Kannada Bible (KNCL) BSI 2016
ಹೀಗೆ ಎಲ್ಲರೂ, ನಮ್ಮ ಕೈಗಳು ಜೋಲುಬಿದ್ದು ಕೆಲಸ ಮುಗಿಯದೆ ನಿಂತುಹೋಗಲಿ ಎಂದುಕೊಂಡು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ನಾನೋ, “ನನ್ನ ದೇವರೇ, ನನ್ನ ಕೈಗಳನ್ನು ಬಲಪಡಿಸಿ,” ಎಂದು ಪ್ರಾರ್ಥಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ, “ಅವರ ಕೈಗಳು ಬಲಹೀನವಾಗುವುವು. ಕೆಲಸವು ಪೂರ್ತಿಯಾಗುವುದಿಲ್ಲ,” ಎಂದುಕೊಂಡು ಅವರೆಲ್ಲರು ನಮ್ಮನ್ನು ಭಯಪಡಿಸಿದರು. ನಾನಾದರೋ, “ದೇವರೇ, ನನ್ನ ಕೈಗಳನ್ನು ಬಲಪಡಿಸಿರಿ,” ಎಂದು ಪ್ರಾರ್ಥಿಸಿದೆನು.