Nehemiah 7:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗೋಡೆಯ ಕೆಲಸ ಪೂರ್ತಿಯಾದ ಬಳಿಕ ದ್ವಾರಗಳಿಗೆ ಬಾಗಿಲುಗಳನ್ನು ಇಡಲು ಪ್ರಾರಂಭಿಸಿದೆವು. ಮತ್ತು ಬಾಗಿಲುಗಳಿಗೆ ಕಾವಲುಗಾರರನ್ನು ನೇಮಿಸಿದೆವು. ದೇವಾಲಯದಲ್ಲಿ ಬೇಕಾಗಿರುವ ಗಾಯಕರನ್ನು ಮತ್ತು ಯಾಜಕರಿಗೆ ಬೇಕಾದ ಸಹಾಯಕರನ್ನು ಆರಿಸಿದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೋಡೆಯನ್ನು ಕಟ್ಟಿ ಮುಗಿಸಿದ ನಂತರ ನಾನು ಬಾಗಿಲುಗಳನ್ನು ಇರಿಸಿದೆನು; ದ್ವಾರಪಾಲಕರನ್ನೂ, ಗಾಯಕರನ್ನೂ, ಲೇವಿಯರನ್ನೂ ನೇಮಿಸಲಾಯಿತು.
Kannada BSI Bible 2016
ನಾನು ಗೋಡೆಯನ್ನು ಕಟ್ಟಿಸಿ ಬಾಗಲುಗಳನ್ನು ನಿಲ್ಲಿಸಿದ ತರುವಾಯ ಬಾಗಲು ಕಾಯುವವರೂ ಹಾಡುಗಾರರೂ ಲೇವಿಯರೂ ನೇಮಿಸಲ್ಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೋಡೆಯನ್ನು ಕಟ್ಟಿ ತೀರಿಸಿದ ನಂತರ ನಾನು ಕದಗಳನ್ನು ಹಚ್ಚಿಸಿದೆನು; ದ್ವಾರಪಾಲಕರೂ ಗಾಯಕರೂ ಲೇವಿಯರೂ ನೇವಿುಸಲ್ಪಟ್ಟರು.
Kannada Bible (KNCL) BSI 2016
ಗೋಡೆಯನ್ನು ಕಟ್ಟಿ ಮುಗಿಸಿದನಂತರ ನಾನು ಕದಗಳನ್ನು ಹಚ್ಚಿಸಿದೆ; ದ್ವಾರಪಾಲಕರನ್ನೂ ಗಾಯಕರನ್ನೂ ಲೇವಿಯರನ್ನೂ ನೇಮಿಸಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಗೋಡೆಯನ್ನು ಪುನಃ ಕಟ್ಟಿಸಿ, ಬಾಗಿಲುಗಳನ್ನು ನಿಲ್ಲಿಸಿ, ತರುವಾಯ ಬಾಗಿಲು ಕಾಯುವವರನ್ನು, ಹಾಡುಗಾರರನ್ನು, ಲೇವಿಯರನ್ನು ನೇಮಿಸಿದೆನು.