Nehemiah 7:63 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕರಲ್ಲಿ: ಹೋಬಾಯ, ಹಕ್ಕೋಚ್ ಮತ್ತು ಬರ್ಜಿಲ್ಲೈ (ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಗಳನ್ನು ಮದುವೆಯಾದವನು ಬರ್ಜಿಲ್ಲೈ ಎಂಬ ಹೆಸರನ್ನು ಇಟ್ಟುಕೊಂಡಿದ್ದನು.) ಸಂತಾನದವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕರಲ್ಲಿ: ಹೋಬಾಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು ತಮ್ಮ ವಂಶಾವಳಿಯ ದಾಖಲೆ ತೋರಿಸಲಾರದೆ ಹೋದರು. ಬರ್ಜಿಲ್ಲೈ ಎಂಬುವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನು ಇಟ್ಟುಕೊಂಡಿದ್ದನು.
Kannada BSI Bible 2016
ಯಾಜಕರಲ್ಲಿ -- ಹೋಬಾಯನ ಮಕ್ಕಳೂ ಬರ್ಜಿಲ್ಲೈಯನ ವಂಶಸ್ಥನಾದ ಹಕ್ಕೋಚನ ಮಕ್ಕಳೂ; ಇವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಕುಮಾರ್ತೆಯರಲ್ಲಿ ಒಬ್ಬಳನ್ನು ತಕ್ಕೊಂಡ ಕಾರಣ ಅವರ ಹೆಸರಿನಿಂದ ಕರೆಯಲ್ಪಟ್ಟವನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕರಲ್ಲಿ ಹೋಬಾಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು ತಮ್ಮ ವಂಶಾವಳಿಯನ್ನು ತೋರಿಸಲಾರದೆ ಹೋದರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣು ಮಕ್ಕಳಲ್ಲೊಬ್ಬಾಕೆಯನ್ನು ಮದುವೆಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.)
Kannada Bible (KNCL) BSI 2016
ಯಾಜಕರಲ್ಲಿ ಹೋಬಾಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು ತಮ್ಮ ವಂಶಾವಳಿಯನ್ನು ತೋರಿಸಲಾರದೆ ಹೋದರು. (ಈ ಬರ್ಜಿಲ್ಲೈ ಎಂಬುವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನು ಇಟ್ಟುಕೊಂಡಿದ್ದನು.)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕರಲ್ಲಿ, ಹಬಯ್ಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು. ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಪುತ್ರಿಯರಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡ ಕಾರಣ ಅವನ ಹೆಸರನ್ನು ಇಟ್ಟುಕೊಂಡನು.