Nehemiah 7:72 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಟ್ಟು ಇತರರು ಮುನ್ನೂರ ಎಪ್ಪತ್ತೈದು ಪೌಂಡು ಬಂಗಾರ, ಹದಿಮೂರುವರೆ ಕ್ವಿಂಟಾಲ್ ಬೆಳ್ಳಿ ಮತ್ತು ಅರವತ್ತೇಳು ಯಾಜಕರ ಬಟ್ಟೆಯನ್ನು ದಾನವಾಗಿ ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಳಿದ ಜನರು ಕೊಟ್ಟದ್ದು ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಒಂದು ಲಕ್ಷ ತೊಲಾ ಬೆಳ್ಳಿ, ಅರುವತ್ತೇಳು ಯಾಜಕವಸ್ತ್ರಗಳನ್ನು ನೀಡಿದರು.
Kannada BSI Bible 2016
ಮಿಕ್ಕಾದ ಜನರು ಕೊಟ್ಟದ್ದೇನಂದರೆ, ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನು ಎರಡುಸಾವಿರ ತೊಲೆ ಬೆಳ್ಳಿಯನ್ನೂ ಅರುವತ್ತೇಳು ಯಾಜಕರ ಅಂಗಿಗಳನ್ನೂ ಕೊಟ್ಟರು.ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಳಿದ ಜನರು ಕೊಟ್ಟದ್ದು - ಇಪ್ಪತ್ತು ಸಾವಿರ ಬಂಗಾರದ ಪವನುಗಳು, ಒಂದು ಲಕ್ಷ ತೊಲೆ ಬೆಳ್ಳಿ, ಅರುವತ್ತೇಳು ಯಾಜಕವಸ್ತ್ರಗಳು.
Kannada Bible (KNCL) BSI 2016
ಉಳಿದ ಜನರು ಕೊಟ್ಟದ್ದು - ನೂರ ಅರವತ್ತೆಂಟು ಕಿಲೋಗ್ರಾಂ ಬಂಗಾರ; ನೂರ ನಲವತ್ತು ಕಿಲೋಗ್ರಾಂ ಬೆಳ್ಳಿ, ಅರುವತ್ತೇಳು ಯಾಜಕವಸ್ತ್ರಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಿಕ್ಕಾದ ಜನರು ಕೊಟ್ಟದ್ದೇನೆಂದರೆ: 170 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ 1.1 ಮೆಟ್ರಿಕ್ ಟನ್ ಬೆಳ್ಳಿಯನ್ನೂ, 67 ಯಾಜಕರ ಅಂಗಿಗಳನ್ನೂ ಕೊಟ್ಟರು.