Nehemiah 7:73 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು ಮತ್ತು ದೇವಾಲಯದ ಸೇವಕರು ತಮ್ಮ ತಮ್ಮ ಊರುಗಳಿಗೆ ಹೋಗಿ ನೆಲೆಸಿದರು. ಇತರ ಎಲ್ಲಾ ಇಸ್ರೇಲರು ತಮ್ಮ ಪಟ್ಟಣಗಳಲ್ಲಿ ನೆಲೆಸಿದರು. ಆ ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ತಮ್ಮತಮ್ಮ ಪಟ್ಟಣಗಳಲ್ಲಿ ನೆಲೆಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಸಾಧಾರಣ ಜನರು ಸೇರಿದವರು, ದೇವಾಲಯದ ಸೇವಕರು ಅಂತೂ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸ ಮಾಡತೊಡಗಿದರು.
Kannada BSI Bible 2016
ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಸಾಧಾರಣಜನರಿಗೆ ಸೇರಿದವರು, ದೇವಸ್ಥಾನದಾಸರು ಅಂತೂ ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.
Kannada Bible (KNCL) BSI 2016
ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಜನಸಾಮಾನ್ಯರು, ದೇವಸ್ಥಾನದ ಪರಿಚಾರಕರು ಅಂತೂ ಇಸ್ರಯೇಲರೆಲ್ಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ಸಾಮಾನ್ಯ ಜನರೂ, ದೇವಾಲಯದ ಸೇವಕರೂ, ಸಮಸ್ತ ಇಸ್ರಾಯೇಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. ಏಳನೆಯ ತಿಂಗಳು ಬಂದಾಗ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.