Nehemiah 8:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಹೋಗಿ ಮೃಷ್ಟಾನ್ನ ಭೋಜನ ಮಾಡಿ ಸಿಹಿ ಪಾನೀಯಗಳನ್ನು ಕುಡಿಯಿರಿ. ಅಡಿಗೆ ಮಾಡದೆ ಇದ್ದವರಿಗೂ ಅವುಗಳನ್ನು ಕೊಡಿರಿ. ಈ ದಿನ ಯೆಹೋವನಿಗೆ ವಿಶೇಷ ದಿನವಾಗಿದೆ. ದುಃಖಿಸಬೇಡಿರಿ. ಯಾಕೆಂದರೆ ಯೆಹೋವನ ಸಂತೋಷವು ನಮ್ಮನ್ನು ಬಲಗೊಳಿಸುತ್ತದೆ” ಎಂದು ನೆಹೆಮೀಯನು ಜನರಿಗೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.
Kannada BSI Bible 2016
ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಎಜ್ರನು ಅವರಿಗೆ - ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿರಿ; ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಭಾಗಗಳನ್ನು ಕಳುಹಿಸಿರಿ. ಈ ದಿನವು ನಮ್ಮ ಕರ್ತನಿಗೆ ಪ್ರತಿಷ್ಠಿತ ದಿನವಾಗಿರುವದರಿಂದ ವ್ಯಸನಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಆಶ್ರಯವಾಗಿದೆ ಅಂದನು.
Kannada Bible (KNCL) BSI 2016
ಇದಲ್ಲದೆ, ಎಜ್ರನು ಅವರಿಗೆ, “ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿ; ತಮಗಾಗಿ ಏನೂ ಸಿದ್ಧಮಾಡದವರಿಗೆ ಒಂದು ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಸರ್ವೇಶ್ವರನಿಗೆ ಪ್ರತಿಷ್ಠಿತ ದಿನ! ವ್ಯಸನಪಡಬೇಡಿ; ಸರ್ವೇಶ್ವರನ ಆನಂದವೇ ನಿಮ್ಮ ಆಶ್ರಯವಾಗಿದೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು.