Nehemiah 8:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಅಭ್ಯಾಸಿಸಿದಾಗ ಧರ್ಮಶಾಸ್ತ್ರದಲ್ಲಿ ಈ ಆಜ್ಞೆಗಳನ್ನು ಕಂಡುಕೊಂಡರು: “ಏಳನೆಯ ತಿಂಗಳಲ್ಲಿ ಯೆಹೋವನ ಆಜ್ಞೆಗನುಸಾರವಾಗಿ ವಿಶೇಷ ಹಬ್ಬವನ್ನು ಆಚರಿಸಲು ಜೆರುಸಲೇಮಿನಲ್ಲಿ ಸೇರಿಬಂದು ತಾತ್ಕಾಲಿಕವಾದ ಬಿಡಾರಗಳಲ್ಲಿ ವಾಸಿಸಬೇಕು. ಅವರು ತಮ್ಮ ಊರುಗಳ ಮತ್ತು ಜೆರುಸಲೇಮಿನ, “ಬೆಟ್ಟಪ್ರದೇಶಗಳಿಗೆ ಹೋಗಿ ಆಲೀವ್, ಖರ್ಜೂರ, ಕಾಡು ಆಲೀವ್, ಸುಗಂಧ ಮುಂತಾದ ಮರಗಳ ರೆಂಬೆಗಳನ್ನು ತೆಗೆದುಕೊಂಡು ಬಂದು ಅವುಗಳಿಂದ ಆ ಬಿಡಾರಗಳನ್ನು ಮಾಡಬೇಕು” ಎಂಬುದಾಗಿ ಯೆಹೋವನು ಮೋಶೆಗೆ ಕೊಟ್ಟಿದ್ದ ಆಜ್ಞೆಗಳೇ ಅವು. (Verses 14-15)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಗೆ ಯೆಹೋವನಿಂದ ದೊರಕಿದ ಧರ್ಮಶಾಸ್ತ್ರದ ಪ್ರಕಾರ ಏಳನೆಯ ತಿಂಗಳಿನ ಜಾತ್ರೆಯಲ್ಲಿ ಇಸ್ರಾಯೇಲರು ಬಿಡಾರಗಳಲ್ಲಿ ವಾಸಮಾಡಬೇಕು.
Kannada BSI Bible 2016
ಆಗ ಅವರು ಏಳನೇ ತಿಂಗಳ ಹಬ್ಬದಲ್ಲಿ ಇಸ್ರಾಯೇಲಿನ ಮಕ್ಕಳು ಗುಡಾರಗಳಲ್ಲಿ ವಾಸವಾಗಿರಬೇಕೆಂದು ಕರ್ತ ನು ಮೋಶೆಯ ಮುಖಾಂತರ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದದ್ದನ್ನು ಕಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳನೆಯ ತಿಂಗಳಿನ ಜಾತ್ರೆಯಲ್ಲಿ ಇಸ್ರಾಯೇಲ್ಯರು ಪರ್ಣಶಾಲೆಗಳಲ್ಲಿ ವಾಸಿಸಬೇಕು;
Kannada Bible (KNCL) BSI 2016
ಏಳನೆಯ ತಿಂಗಳಿನ ಜಾತ್ರೆಯಲ್ಲಿ ಇಸ್ರಯೇಲರು ಪರ್ಣಕುಟೀರಗಳಲ್ಲಿ ವಾಸಿಸಬೇಕಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಏಳನೆಯ ತಿಂಗಳ ಹಬ್ಬದಲ್ಲಿ, ಇಸ್ರಾಯೇಲರು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರ ಆಜ್ಞಾಪಿಸಿದ ವಿಷಯ ನಿಯಮದಲ್ಲಿ ಬರೆದದ್ದನ್ನು ಕಂಡರು.