Nehemiah 8:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೆರೆವಾಸದಿಂದ ಮರಳಿಬಂದ ಇಸ್ರೇಲರು ಬಿಡಾರಗಳನ್ನು ಹಾಕಿಕೊಂಡು ಅವುಗಳಲ್ಲಿ ವಾಸಿಸಿದರು. ನೂನನ ಮಗನಾದ ಯೆಹೋಶುವನ ಕಾಲದಿಂದ ಇಂದಿನವರೆಗೂ ಇಸ್ರೇಲರು ಇಂಥ ಪರ್ಣಶಾಲೆಗಳ ಹಬ್ಬವನ್ನು ಆಚರಿಸಲಿಲ್ಲ. ಪ್ರತಿಯೊಬ್ಬರೂ ಬಹು ಸಂತೋಷಗೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೂನನ ಮಗನಾದ ಯೆಹೋಶುವನ ಕಾಲದಿಂದ ಆ ವರೆಗೂ ಇಸ್ರಾಯೇಲರು ಹೀಗೆ ಮಾಡಿರಲಿಲ್ಲ. ಸೆರೆಯಿಂದ ಹಿಂತಿರುಗಿ ಬಂದ ಸರ್ವ ಸಮೂಹದವರಾದರೋ ಬಿಡಾರಗಳನ್ನು ಮಾಡಿಕೊಂಡು ಅವುಗಳಲ್ಲಿ ವಾಸಮಾಡುತ್ತಾ ಬಹಳ ಸಂತೋಷಪಟ್ಟರು.
Kannada BSI Bible 2016
ಈ ಪ್ರಕಾರ ಸೆರೆಯಿಂದ ತಿರಿಗಿ ಬಂದ ಸಭೆಯವರೆಲ್ಲರೂ ಗುಡಾರಗಳನ್ನು ಹಾಕಿ ಗುಡಾರಗಳಲ್ಲಿ ವಾಸವಾಗಿದ್ದರು. ನೂನನ ಮಗನಾದ ಯೆಹೋಶುವನ ದಿನವು ಮೊದಲ ಗೊಂಡು ಆ ದಿವಸದ ವರೆಗೂ ಇಸ್ರಾಯೇಲ್ ಮಕ್ಕಳು ಹಾಗೆ ಮಾಡಿರಲಿಲ್ಲ. ಅಲ್ಲಿ ಅವರಿಗೆ ಬಹಳ ಸಂತೋಷ ಇತ್ತು.ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೂನನ ಮಗನಾದ ಯೆಹೋಶುವನ ಕಾಲದಿಂದ ಆವರೆಗೂ ಇಸ್ರಾಯೇಲ್ಯರು ಹೀಗೆ ಮಾಡಿದ್ದಿಲ್ಲ. ಸೆರೆಯಿಂದ ತಿರಿಗಿ ಬಂದ ಸರ್ವಸಮೂಹದವರಾದರೋ ಪರ್ಣಶಾಲೆಗಳನ್ನು ಮಾಡಿಕೊಂಡು ಅವುಗಳಲ್ಲಿ ವಾಸಿಸುತ್ತಾ ಬಹು ಸಂತೋಷಪಟ್ಟರು.
Kannada Bible (KNCL) BSI 2016
ನೂನನ ಮಗ ಯೆಹೋಶುವನ ಕಾಲದಿಂದ ಆವರೆಗೂ ಇಸ್ರಯೇಲರು ಹೀಗೆ ಮಾಡಿರಲಿಲ್ಲ. ಸೆರೆಯಿಂದ ಹಿಂತಿರುಗಿಬಂದ ಸರ್ವಸಮಾಜದವರು ಪರ್ಣಕುಟೀರಗಳನ್ನು ಮಾಡಿಕೊಂಡು, ಅವುಗಳಲ್ಲಿ ವಾಸಿಸುತ್ತಾ, ಬಹು ಸಂತೋಷಪಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪ್ರಕಾರ ಸೆರೆಯಿಂದ ತಿರುಗಿ ಬಂದ ಸಭೆಯವರೆಲ್ಲರು ಪರ್ಣಶಾಲೆಗಳನ್ನು ಹಾಕಿ, ಅದರಲ್ಲಿ ವಾಸವಾಗಿದ್ದರು. ನೂನನ ಮಗ ಯೆಹೋಶುವನ ದಿನವು ಮೊದಲುಗೊಂಡು ಆ ದಿವಸದವರೆಗೂ ಇಸ್ರಾಯೇಲರು ಹಾಗೆ ಮಾಡಿರಲಿಲ್ಲ. ಅಲ್ಲಿ ಅವರಿಗೆ ಬಹಳ ಸಂತೋಷವಿತ್ತು.