Nehemiah 8:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಜ್ರನು ಮುಂಜಾನೆಯಿಂದ ಹಿಡಿದು ಮಧ್ಯಾಹ್ನದವರೆಗೆ ಬುಗ್ಗೆಬಾಗಿಲಿನ ಮುಂದೆ ಇರುವ ಮೈದಾನದಲ್ಲಿ ಸೇರಿ ಬಂದಿದ್ದ ಜನರೆದುರಾಗಿ ನಿಂತು ಗಟ್ಟಿಯಾಗಿ ಧರ್ಮಶಾಸ್ತ್ರವನ್ನು ಓದಿದನು. ಎಲ್ಲಾ ಜನರು ಎಚ್ಚರಿಕೆಯಿಂದ ಕೇಳಿ ಧರ್ಮಶಾಸ್ತ್ರವನ್ನು ಗ್ರಹಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ನೆರೆದು ಬಂದಿದ್ದ ಗ್ರಹಿಸಲು ಶಕ್ತರಾದ ಸ್ತ್ರೀಪುರುಷರ ಮುಂದೆ ಧರ್ಮಶಾಸ್ತ್ರವನ್ನು ಮುಂಜಾನೆಯಿಂದ ಮಧ್ಯಾಹ್ನದವರೆಗೂ ಓದಿದನು. ಜನರು ಆಲಿಸುತ್ತಾ ಇದ್ದರು.
Kannada BSI Bible 2016
ಎಜ್ರನು ನ್ಯಾಯ ಪ್ರಮಾಣವನ್ನು ತಕ್ಕೊಂಡು ಬಂದು ನೀರಿನ ಬಾಗಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದ ವರೆಗೆ ಓದಿದನು. ಜನರೆ ಲ್ಲರೂ ನ್ಯಾಯಪ್ರಮಾಣಕ್ಕೆ ಕಿವಿಗೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಧರ್ಮಶಾಸ್ತ್ರವನ್ನು ತಂದು ಪ್ರಾತಃಕಾಲದಿಂದ ಮಧ್ಯಾಹ್ನದವರೆಗೂ ಓದಿದನು. ನೀರುಬಾಗಲಿನ ಮುಂದಣ ಬೈಲಿನಲ್ಲಿ ಕೂಡಿಬಂದಿದ್ದ ಸ್ತ್ರೀಪುರುಷರಲ್ಲಿ ಗ್ರಹಿಸಶಕ್ತರಾದವರೆಲ್ಲರೂ ಧರ್ಮಶಾಸ್ತ್ರಪಾರಾಯಣವನ್ನು ಲಾಲಿಸುತ್ತಾ ಇದ್ದರು.
Kannada Bible (KNCL) BSI 2016
ಆ ನೀರುಬಾಗಿಲಿನ ಮುಂದಣ ಬಯಲಿನಲ್ಲಿ ಕೂಡಿಬಂದಿದ್ದ ಸ್ತ್ರೀಪುರುಷರಲ್ಲಿ ಗ್ರಹಿಸಲು ಶಕ್ತರಾದವರೆಲ್ಲರೂ ಧರ್ಮಶಾಸ್ತ್ರ ಪಾರಾಯಣವನ್ನು ಆಲಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಎಜ್ರನು ನೀರಿನ ಬಾಗಿಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದವರೆಗೆ ಓದಿದನು. ಜನರೆಲ್ಲರು ನಿಯಮದ ಗ್ರಂಥಕ್ಕೆ ಕಿವಿಗೊಟ್ಟರು.