Nehemiah 8:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಜ್ರನು ಎತ್ತರವಾದ ವೇದಿಕೆಯ ಮೇಲೆ ನಿಂತಿದ್ದರಿಂದ ಎಲ್ಲರೂ ಅವನನ್ನು ನೋಡಲು ಸಾಧ್ಯವಾಯಿತು. ಎಜ್ರನು ಧರ್ಮಶಾಸ್ತ್ರವನ್ನು ತೆರೆಯುವಾಗ ಎಲ್ಲಾ ಜನರು ನಿಂತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸರ್ವಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷಮದಲ್ಲಿ ಗ್ರಂಥವನ್ನು ತೆರೆದ ಕೂಡಲೆ ಎಲ್ಲರೂ ಎದ್ದು ನಿಂತರು.
Kannada BSI Bible 2016
ಎಜ್ರನು ಸಕಲ ಜನರ ಕಣ್ಣುಗಳ ಮುಂದೆ ಪುಸ್ತಕವನ್ನು ತೆರೆದನು; (ಯಾಕಂದರೆ ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ಇದ್ದನು;) ಅವನು ಅದನ್ನು ತೆರೆದಾಗ ಜನರೆಲ್ಲರೂ ಎದ್ದು ನಿಂತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸರ್ವಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷದಲ್ಲಿ ಗ್ರಂಥವನ್ನು ತೆರೆದ ಕೂಡಲೆ ಎಲ್ಲರೂ ಎದ್ದು ನಿಂತರು.
Kannada Bible (KNCL) BSI 2016
ಜನಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷಮದಲ್ಲಿ ಗ್ರಂಥವನ್ನು ತೆರೆದ ಕೂಡಲೆ, ಎಲ್ಲರು ಎದ್ದುನಿಂತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಜ್ರನು ಸಕಲ ಜನರ ಕಣ್ಣು ಮುಂದೆ ದೇವರ ಗ್ರಂಥವನ್ನು ತೆರೆದನು. ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ನಿಂತಿದ್ದನು. ಅವನು ಅದನ್ನು ತೆರೆದಾಗ, ಜನರೆಲ್ಲರು ಎದ್ದು ನಿಂತರು.