Nehemiah 8:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಜನರೆಲ್ಲಾ ಅಳಲು ಪ್ರಾರಂಭಿಸಿದರು. ಆಗ ರಾಜ್ಯಪಾಲನಾದ ನೆಹೆಮೀಯನೂ ಯಾಜಕನೂ ಮತ್ತು ಉಪದೇಶಕನೂ ಆಗಿದ್ದ ಎಜ್ರನೂ ಲೇವಿಯರೂ ಎದ್ದುನಿಂತು ಜನರಿಗೆ, “ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ವಿಶೇಷ ದಿನವಾಗಿದೆ. ಆದ್ದರಿಂದ ದುಃಖಿಸಬೇಡಿ ಮತ್ತು ಅಳಬೇಡಿರಿ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರೆಲ್ಲರೂ ಧರ್ಮೋಪದೇಶ ವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದುದರಿಂದ ದೇಶಾಧಿಪತಿಯಾದ ನೆಹೆಮೀಯನೂ, ಧರ್ಮೋಪದೇಶಕನಾದ ಎಜ್ರನೂ, ಜನರಿಗೆ ಬೋಧಿಸುತ್ತಿದ್ದ ಲೇವಿಯರೂ, “ಯೆಹೋವನಿಗೆ ಈ ದಿನವು ಪರಿಶುದ್ಧವಾಗಿರುವುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ” ಎಂದು ಹೇಳಿದರು.
Kannada BSI Bible 2016
ಇದಲ್ಲದೆ ತಿರ್ಷತನಾದ ನೆಹೆವಿಾಯನೂ ಶಾಸ್ತ್ರಿ ಯೂ, ಯಾಜಕನೂ ಆದ ಎಜ್ರನೂ ಜನರನ್ನು ಬೋಧಿಸಿದ ಲೇವಿಯರೂ ಜನರೆಲ್ಲರಿಗೆ ಹೇಳಿದ್ದೇ ನಂದರೆ--ಈ ದಿನವು ನಿಮ್ಮ ದೇವರಾಗಿರುವ ಕರ್ತನಿಗೆ ಪರಿಶುದ್ಧವಾದದರಿಂದ ದುಃಖಿಸದೆ, ಅಳದೆ ಇರ್ರಿ. ಯಾಕಂದರೆ ಜನರೆಲ್ಲರು ನ್ಯಾಯಪ್ರಮಾಣದ ಮಾತು ಗಳನ್ನು ಕೇಳಿದಾಗ ಅತ್ತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರೆಲ್ಲರೂ ಧರ್ಮೋಪದೇಶವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದದರಿಂದ ದೇಶಾಧಿಪತಿಯಾದ ನೆಹೆಮೀಯನೂ ಧರ್ಮೋಪದೇಶಮಾಡುವ ಯಾಜಕನಾದ ಎಜ್ರನೂ ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಅವರಿಗೆ - ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ಪರಿಶುದ್ಧದಿನವಾಗಿರುವದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ ಎಂದು ಹೇಳಿದರು.
Kannada Bible (KNCL) BSI 2016
ಜನರೆಲ್ಲರು ಧರ್ಮೋಪದೇಶದ ವಾಕ್ಯಗಳನ್ನು ಕೇಳುತ್ತಾ ಕಣ್ಣೀರಿಡುತ್ತಿದ್ದರು. ರಾಜ್ಯಪಾಲ ನೆಹೆಮೀಯನು, ಧರ್ಮೋಪದೇಶ ಮಾಡುವ ಯಾಜಕ ಎಜ್ರನು ಹಾಗು ಜನರನ್ನು ಸಂಬೋಧಿಸುತ್ತಿದ್ದ ಲೇವಿಯರು ಜನರಿಗೆ, “ಈ ದಿನ ನಿಮ್ಮ ದೇವರಾದ ಸರ್ವೇಶ್ವರನಿಗೆ ಪರಿಶುದ್ಧ ದಿನ! ಆದುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾಜಪಾಲನಾದ ನೆಹೆಮೀಯನೂ, ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನೂ, ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಜನರೆಲ್ಲರಿಗೆ: “ಈ ದಿನವು ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಪರಿಶುದ್ಧವಾದುದರಿಂದ ದುಃಖಿಸದೆ, ಅಳದೆ ಇರಿ,” ಎಂದರು. ಏಕೆಂದರೆ ಜನರೆಲ್ಲರು ದೇವರ ನಿಯಮದ ಮಾತುಗಳನ್ನು ಕೇಳಿದಾಗ ಅತ್ತರು.