Nehemiah 9:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫರೋಹನಿಗೂ ಅವನ ಅಧಿಕಾರಿಗಳಿಗೂ ಅವನ ಜನರಿಗೂ ವಿರೋಧವಾಗಿ ನೀನು ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದೆ. ಈಜಿಪ್ಟಿನವರು ತಮ್ಮನ್ನು ನಮ್ಮ ಪೂರ್ವಿಕರಿಗಿಂತ ಉತ್ತಮರೆಂದು ಭಾವಿಸಿಕೊಂಡದ್ದು ನನಗೆ ಗೊತ್ತಿತ್ತು. ಆದರೆ ನೀನು ಎಂಥಾ ಮಹಾ ವ್ಯಕ್ತಿಯೆಂದು ಅವರಿಗೆ ರುಜುವಾತುಪಡಿಸಿದೆ! ಅದನ್ನು ಈಗಲೂ ಅವರು ನೆನಪು ಮಾಡುತ್ತಿರುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತ್ಯರು ಗರ್ವಿಗಳಾಗಿ ನಮ್ಮ ಪೂರ್ವಿಕರನ್ನು ಕುಗ್ಗಿಸಿದಾಗ, ನೀನು ಫರೋಹನಲ್ಲಿಯೂ, ಅವನ ಸೇವಕರಲ್ಲಿಯು, ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನು ನಡೆಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿಕೊಂಡಿರುವೆ.
Kannada BSI Bible 2016
ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತ್ಯರು ಗರ್ವಿಗಳಾಗಿ ಅವರನ್ನು ಕುಗ್ಗಿಸಿದಾಗ ನೀನು ಫರೋಹನಲ್ಲಿಯೂ ಅವನ ಸೇವಕರಲ್ಲಿಯೂ ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡಿಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿದಿ.
Kannada Bible (KNCL) BSI 2016
ಈಜಿಪ್ಟಿನವರು ಅವರನು ದರ್ಪದಿಂದ ದಮನಮಾಡುವಲ್ಲಿ ಎಸಗಿದಿರಿ ಅದ್ಭುತಕಾರ್ಯಗಳನು ಸೂಚಕಕಾರ್ಯಗಳನು ಫರೋಹನಲಿ, ಅವನ ಸೇವಕರಲಿ, ಆ ನಾಡಿನ ಜನರಲಿ. ಉಳಿಸಿಕೊಂಡಿರಿ ಇಂದಿಗೂ ಅಂದು ಸಾಧಿಸಿದ ಕೀರ್ತಿಯನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟಿನವರು ಗರ್ವಿಗಳಾಗಿ ಇಸ್ರಾಯೇಲರನ್ನು ಕುಗ್ಗಿಸಿದಾಗ, ನೀವು ಫರೋಹನ ಮೇಲೆಯೂ, ಅವನ ಸಮಸ್ತ ಅಧಿಕಾರಿಗಳ ಮೇಲೆಯೂ, ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದಿರಿ. ಈ ಪ್ರಕಾರವೇ ನೀವು ಇಂದಿನವರೆಗೂ ನಿಮ್ಮ ಹೆಸರಿನ ಕೀರ್ತಿಯನ್ನು ಸ್ಥಾಪಿಸಿದ್ದೀರಿ.