Nehemiah 9:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಗಲಿನಲ್ಲಿ ಅವರನ್ನು ನಡೆಸಲು ಮೇಘಸ್ತಂಭವನ್ನು ಉಪಯೋಗಿಸಿದೆ. ರಾತ್ರಿವೇಳೆಯಲ್ಲಿ ಅಗ್ನಿಸ್ತಂಭವನ್ನು ಉಪಯೋಗಿಸಿದೆ. ಹೀಗೆ ಅವರ ಮಾರ್ಗವನ್ನು ಬೆಳಕಿನಿಂದ ಹೊದಿಸಿದೆ. ಎಲ್ಲಿಗೆ ಹೋಗಬೇಕೆಂದು ಅವರಿಗೆ ತೋರಿಸಿದಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಗಲಿನಲ್ಲಿ ಮೇಘಸ್ತಂಭವಾಗಿಯೂ, ರಾತ್ರಿ ವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭವಾಗಿಯೂ ಅವರ ಮುಂದೆ ನೀನು ನಡೆದೆ.
Kannada BSI Bible 2016
ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಗಲುಹೊತ್ತಿನಲ್ಲಿ ಮೇಘಸ್ತಂಭದಲ್ಲಿಯೂ ರಾತ್ರಿವೇಳೆಯಲ್ಲಿ ಅವರು ನಡೆಯ ತಕ್ಕ ದಾರಿಯಲ್ಲಿ ಬೆಳಕುಕೊಡುವದಕ್ಕೆ ಅಗ್ನಿ ಸ್ತಂಭದಲ್ಲಿಯೂ ಅವರ ಮುಂದೆ ಹೋದಿ.
Kannada Bible (KNCL) BSI 2016
ಹಗಲಲಿ ಅವರ ಮುಂದೆ ಸಾಗಿದಿರಿ ಮೇಘಸ್ತಂಭದಂತೆ ಇರುಳಲಿ ದಾರಿತೋರಿದಿರಿ ಬೆಳಕನೀವ ಅಗ್ನಿಸ್ತಂಭದಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಹಗಲಿನಲ್ಲಿ ಮೇಘಸ್ತಂಭದಿಂದಲೂ, ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭದಿಂದಲೂ ಅವರನ್ನು ನಡೆಸಿದಿರಿ.