Nehemiah 9:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಸೀನಾಯ ಬೆಟ್ಟಕ್ಕೆ ಇಳಿದುಬಂದೆ. ಪರಲೋಕದಿಂದ ಅವರೊಂದಿಗೆ ಮಾತನಾಡಿದೆ. ಅವರಿಗೆ ಒಳ್ಳೆಯ ಕಟ್ಟಳೆಗಳನ್ನು ದಯಪಾಲಿಸಿದೆ; ಸತ್ಯಬೋಧನೆಯನ್ನು ನೀಡಿದೆ, ವಿಧಿನಿಯಮಗಳನ್ನು ಕಲಿಸಿದೆ. ಅವುಗಳೆಲ್ಲಾ ಉತ್ತಮವಾದವುಗಳೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತನಾಡಿ, ಅವರಿಗೆ ನೀತಿನಿಯಮಗಳನ್ನೂ, ಯಥಾರ್ಥ ಧರ್ಮೋಪದೇಶವನ್ನೂ, ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದೆ.
Kannada BSI Bible 2016
ಸೀನಾಯ್‌ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತಾಡಿ ಅವರಿಗೆ ನೀತಿನಿಯಮಗಳನ್ನೂ ಯಥಾರ್ಥ ಧರ್ಮೋಪದೇಶವನ್ನೂ ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದಿ.
Kannada Bible (KNCL) BSI 2016
ಸೀನಾಯಿ ಬೆಟ್ಟದ ಮೇಲೆ ಇಳಿದುಬಂದು ಆಕಾಶದ ಕಡೆಯಿಂದ ಅವರೊಡನೆ ಮಾತಾಡಬಂದು ಅವರಿಗನುಗ್ರಹಿಸಿದಿರಿ ನೀತಿನಿಯಮಗಳನು ಸತ್ಯಧರ್ಮೋಪದೇಶವನು, ಶ್ರೇಷ್ಠ ಆಜ್ಞಾವಿಧಿಗಳನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಸೀನಾಯಿ ಪರ್ವತದ ಮೇಲಕ್ಕೆ ಇಳಿದುಬಂದು, ಆಕಾಶದಿಂದ ಅವರ ಸಂಗಡ ಮಾತನಾಡಿದಿರಿ. ಸರಿಯಾದ ನ್ಯಾಯಗಳನ್ನೂ, ಸತ್ಯವಾದ ನಿಯಮಗಳನ್ನೂ, ಉತ್ತಮವಾದ ಕಟ್ಟಳೆಗಳನ್ನೂ, ಆಜ್ಞೆಗಳನ್ನೂ ಅವರಿಗೆ ಕೊಟ್ಟಿರಿ.