Nehemiah 9:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಹಸಿದಿದ್ದಾಗ ಪರಲೋಕದಿಂದ ಊಟವನ್ನು ಅವರಿಗೆ ದಯಪಾಲಿಸಿದೆ. ಅವರು ಬಾಯಾರಿದಾಗ ಬಂಡೆಯಿಂದ ಅವರಿಗೆ ನೀರನ್ನು ಕೊಟ್ಟೆ. ನೀನು ಅವರಿಗೆ, “ಬನ್ನಿ, ಈ ದೇಶವನ್ನು ತೆಗೆದುಕೊಳ್ಳಿರಿ” ಎಂದು ಹೇಳಿದೆ. ನಿನ್ನ ಪರಾಕ್ರಮವನ್ನು ತೋರಿಸಿದೆ. ಅವರಿಗಾಗಿ ಭೂಮಿಯನ್ನು ತೆಗೆದುಕೊಂಡೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಗೆ ಹಸಿವಾದಾಗ ಪರಲೋಕದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ, ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದೆ.
Kannada BSI Bible 2016
ಅವರ ಹಸಿವೆಗೋಸ್ಕರ ಆಕಾಶದಿಂದ ರೊಟ್ಟಿಯನ್ನೂ ಕೊಟ್ಟಿ; ಅವರ ದಾಹಕ್ಕೋಸ್ಕರ ಬಂಡೆಯಿಂದ ನೀರನ್ನು ಬರಮಾಡಿ ನೀನು ಅವರಿಗೆ ಕೊಡಲು ಪ್ರಮಾಣ ಮಾಡಿದ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವ ಹಾಗೆ ಅವರಿಗೆ ವಾಗ್ದಾನಮಾಡಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದಿ.
Kannada Bible (KNCL) BSI 2016
ಹಸಿದಿದ್ದಾಗ ಅವರಿಗಿತ್ತಿರಿ ಉಣವನು ಆಗಸದಿಂದ ಬಾಯಾರಿದ್ದಾಗ ನೀರ ಬರಮಾಡಿದಿರಿ ಬಂಡೆಯೊಳಗಿಂದ ವಾಗ್ದತ್ತ ನಾಡ ಸೇರಿ ಸ್ವಾಧೀನಪಡಿಸಿಕೊಂಡರು ನಿಮ್ಮಾಜ್ಞೆಯಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿದಿರಿ. ನಿಮ್ಮ ಉನ್ನತ ಹಸ್ತದಿಂದ ವಾಗ್ದಾನ ಮಾಡಿದ ದೇಶದಲ್ಲಿ ನೀವು ಅವರನ್ನು ಸೇರಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಹೇಳಿದಿರಿ.