Nehemiah 9:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.
Kannada BSI Bible 2016
ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಮರೆತು ಮಾತುಕೇಳದೆ ಹಟಹಿಡಿದು ತಮಗೊಬ್ಬ ನಾಯಕನನ್ನು ನೇವಿುಸಿಕೊಂಡು ಮುಂಚಿನಂತೆ ದಾಸರಾಗಿರುವದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ನೀನಾದರೋ ಪಾಪಗಳನ್ನು ಕ್ಷವಿುಸುವವನೂ ಕನಿಕರದಯೆಗಳುಳ್ಳವನೂ ದೀರ್ಘಶಾಂತನೂ ಕೃಪಾಳುವೂ ಆಗಿರುವ ದೇವರು; ನೀನು ಅವರನ್ನು ಕೈಬಿಡಲಿಲ್ಲ.
Kannada Bible (KNCL) BSI 2016
ಮರೆತುಬಿಟ್ಟರು ನೀವೆಸಗಿದ ಮಹಾತ್ಕಾರ್ಯಗಳನು ಹಟಹಿಡಿದರು ತಮಗೊಬ್ಬ ನಾಯಕನ ನೇಮಿಸಿಕೊಳ್ಳಲು; ಈಜಿಪ್ಟಿಗೆ ತೆರಳಲಿದ್ದರು ಮರಳಿ ಗುಲಾಮರಾಗಲು. ನೀವಾದರೋ ಪಾಪಿಗಳನು ಕ್ಷಮಿಸುವವರು ದಯಾಪೂರಿತರು, ದೀರ್ಘಶಾಂತರು, ಕೃಪಾಳು ದೇವರು, ಅವರನು ಕೈಬಿಡದೆ ಕಾಪಾಡಿ ನಡೆಸಿದವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.