Nehemiah 9:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಬಂಗಾರದಿಂದ ಕರುವಿನಾಕೃತಿಯ ವಿಗ್ರಹವನ್ನು ಮಾಡಿ, “ಈ ವಿಗ್ರಹವೇ ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದದ್ದು” ಎಂದು ಹೇಳಿದರೂ ನೀನು ಅವರನ್ನು ತೊರೆದುಬಿಡಲಿಲ್ಲ. ಅವರು ನಿನಗೆ ವಿರೋಧವಾಗಿ ದೂಷಿಸಿ ಪಾಪಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತಮಗೆ ಎರಕದ ಬಸವನನ್ನು ಮಾಡಿಕೊಂಡು, ‘ಇಸ್ರಾಯೇಲರೇ, ನಿಮ್ಮನ್ನು ಐಗುಪ್ತದಿಂದ ಕರೆದುಕೊಂಡು ಬಂದ ದೇವರು ಇದೇ’ ಎಂದು ಹೇಳಿ ನಿನ್ನನ್ನು ಅಸಡ್ಡೆಮಾಡಿದಾಗಲೂ,
Kannada BSI Bible 2016
ಅವರು ತಮಗೆ ಎರಕಹೊಯಿದ ಒಂದು ಕರುವನ್ನು ಮಾಡಿಕೊಂಡು -- ಐಗುಪ್ತದೊಳಗಿಂದ ನಿನ್ನನ್ನು ಬರಮಾಡಿದ ನಿನ್ನ ದೇವರು ಇದೇ ಎಂದು ಹೇಳಿ ನಿನ್ನನ್ನು ಬಹು ಉದ್ರೇಕಗೊಳಿಸಿದಾಗಲೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ತಮಗೆ ಎರಕದ ಬಸವನನ್ನು ಮಾಡಿಕೊಂಡು - [ಇಸ್ರಾಯೇಲ್ಯರೇ,] ನಿಮ್ಮನ್ನು ಐಗುಪ್ತದಿಂದ ಕರಕೊಂಡು ಬಂದ ದೇವರು ಇದೇ ಎಂದು ಹೇಳಿ ನಿನ್ನನ್ನು ಅಸಡ್ಡೆ ಮಾಡಿದಾಗಲೂ
Kannada Bible (KNCL) BSI 2016
ಅವರಾದರೋ ಎರಕದ ಹೋರಿಕರುವನು ಮಾಡಿಕೊಂಡರು ತಮ್ಮನು ಈಜಿಪ್ಟಿನಿಂದ ಕರೆತಂದುದು ಅದೇ ಎಂದುಕೊಂಡರು. ಈ ಪರಿಯ ವರ್ತನೆಯಿಂದ ನಿಮ್ಮನ್ನೇ ಅಸಡ್ಡೆಮಾಡಿಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ತಮಗೋಸ್ಕರ ಒಂದು ಎರಕದ ಕರುವನ್ನು ಮಾಡಿಕೊಂಡರು. ‘ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ,’ ಎಂದು ಹೇಳಿ, ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.