Nehemiah 9:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ತುಂಬಾ ಕನಿಕರವುಳ್ಳ ದೇವರು. ಆದ್ದರಿಂದ ಅವರನ್ನು ಮರುಭೂಮಿಯಲ್ಲಿಯೇ ಬಿಡಲಿಲ್ಲ. ಹಗಲಿನಲ್ಲಿ ಅವರಿಂದ ಎತ್ತರವಾದ ಮೋಡವನ್ನು ತೆಗೆದುಬಿಡಲಿಲ್ಲ. ನೀನು ಅವರನ್ನು ಮುನ್ನಡೆಸಿಕೊಂಡೇ ಹೋದೆ. ರಾತ್ರಿಯಲ್ಲಿ ಅವರಿಂದ ಅಗ್ನಿಸ್ತಂಭವನ್ನು ತೆಗೆದುಬಿಡಲಿಲ್ಲ. ಅವರ ದಾರಿಗೆ ಬೆಳಕನ್ನು ನೀಡುತ್ತಾ ಅವರು ಹೋಗತಕ್ಕ ದಾರಿಯಲ್ಲಿ ಮುನ್ನಡೆಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರುಣಾನಿಧಿಯಾದ ನೀನು ಅವರನ್ನು ಅರಣ್ಯದಲ್ಲಿ ಕೈಬಿಡಲಿಲ್ಲ, ಹಗಲಿನಲ್ಲಿ ಅವರಿಗೆ ದಾರಿ ತೋರಿಸುತ್ತಿದ್ದ ಮೇಘಸ್ತಂಭವೂ, ರಾತ್ರಿವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುತ್ತಿದ್ದ ಅಗ್ನಿಸ್ತಂಭವೂ, ಅವರನ್ನು ಬಿಟ್ಟುಹೋಗದಂತೆ ಮಾಡಿದೆ.
Kannada BSI Bible 2016
ನೀನು ನಿನ್ನ ಹೇರಳವಾದ ಕರುಣೆಯಿಂದ ಅರಣ್ಯದಲ್ಲಿ ಅವರನ್ನು ಕೈಬಿಡದೆ ಇದ್ದಿ. ಹಗಲಿನಲ್ಲಿ ಅವರಿಗೆ ದಾರಿ ತೋರಿಸತಕ್ಕ ಮೇಘಸ್ತಂಭವಾದರೂ ರಾತ್ರಿಯಲ್ಲಿ ಅವರಿಗೆ ಬೆಳಕನ್ನು, ಅವರು ನಡೆಯತಕ್ಕ ಮಾರ್ಗವನ್ನು ತೋರಿಸುವ ಅಗ್ನಿಸ್ತಂಭವಾದರೂ ಅವರನ್ನು ಬಿಟ್ಟು ಹೋಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರುಣಾನಿಧಿಯಾದ ನೀನು ಅವರನ್ನು ಅರಣ್ಯದಲ್ಲಿ ಕೈಬಿಡಲಿಲ್ಲ, ಹಗಲಿನಲ್ಲಿ ಅವರಿಗೆ ದಾರಿ ತೋರಿಸುತ್ತಿದ್ದ ಮೇಘ ಸ್ತಂಭವೂ ರಾತ್ರಿವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕು ಕೊಡುತ್ತಿದ್ದ ಅಗ್ನಿಸ್ತಂಭವೂ ಅವರನ್ನು ಬಿಟ್ಟುಹೋಗಲಿಲ್ಲ.
Kannada Bible (KNCL) BSI 2016
ಹೀಗಿದ್ದರು ನೀವಾದಿರಿ ಅವರಿಗೆ ಕರುಣಾನಿಧಿ ತೊರೆದುಬಿಡಲಿಲ್ಲ ನೀವವರನು ಮರುಭೂಮಿಯಲಿ. ಬಿಟ್ಟುಹೋಗಲಿಲ್ಲ ದಾರಿತೋರಿದಾ ಮೇಘಸ್ತಂಭ ಹಗಲಲಿ ಮುನ್ನಡೆಯಿತು ಬೆಳಕನೀಯುತಾ ಅಗ್ನಿಸ್ತಂಭ ಇರುಳಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ನೀವು ನಿಮ್ಮ ಬಹು ಕರುಣೆಯಿಂದ ಮರುಭೂಮಿಯಲ್ಲಿ ಅವರನ್ನು ಕೈಬಿಡಲಿಲ್ಲ. ಹಗಲಿನಲ್ಲಿ ಅವರಿಗೆ ಮೇಘಸ್ತಂಭವು ದಾರಿ ತೋರಿಸದೆ ಇರಲಿಲ್ಲ. ರಾತ್ರಿಯಲ್ಲಿ ಅವರಿಗೆ ಬೆಳಕನ್ನೂ, ಅವರು ನಡೆಯತಕ್ಕ ಮಾರ್ಗವನ್ನೂ ತೋರಿಸುವ ಅಗ್ನಿ ಸ್ತಂಭವು ಅವರನ್ನು ಬಿಟ್ಟುಹೋಗಲಿಲ್ಲ.