Nehemiah 9:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಕೊಟ್ಟೆ. ಕೆಲವೇ ಜನರು ವಾಸವಾಗಿದ್ದ ಬಹುದೂರದ ಸ್ಥಳಗಳನ್ನು ಕೊಟ್ಟೆ. ಹೆಷ್ಬೋನಿನ ರಾಜನಾದ ಸೀಹೋನನ ನಾಡನ್ನು ಮತ್ತು ಬಾಷಾನಿನ ರಾಜನಾದ ಓಗನ ನಾಡನ್ನು ಅವರು ಪಡೆದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜ್ಯಗಳನ್ನೂ, ಜನಾಂಗಗಳನ್ನು ಅವರಿಗೆ ವಶಪಡಿಸಿ, ಆ ರಾಜ್ಯಗಳನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟೆ. ಹೀಗೆ ಅವರು ಹೆಷ್ಬೋನಿನ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ಪ್ರಾಂತ್ಯಗಳನ್ನು ಸ್ವಾಧೀನಪಡಿಸಿಕೊಂಡರು.
Kannada BSI Bible 2016
ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜ್ಯಜನಾಂಗಗಳನ್ನು ಅವರಿಗೆ ವಶಪಡಿಸಿ ಆ ರಾಜ್ಯಗಳನ್ನು ಅವರಿಗೆ ಸ್ವಾಸ್ತ್ಯವನ್ನಾಗಿ ಹಂಚಿಕೊಟ್ಟಿ. ಹೀಗೆ ಅವರು ಹೆಷ್ಬೋನಿನ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ಪ್ರಾಂತಗಳನ್ನು ಸ್ವಾಧೀನಪಡಿಸಿಕೊಂಡರು.
Kannada Bible (KNCL) BSI 2016
ರಾಜ್ಯಗಳನು, ಜನಾಂಗಗಳನು ವಶಪಡಿಸಿದಿರಿ ಅವರಿಗೆ ಹಂಚಿಕೊಟ್ಟಿರಿ ಆ ರಾಷ್ಟ್ರಗಳ ಸೊತ್ತುಗಳನೆ ಹೆಷ್ಬೋನಿನ ಅರಸ ಸೀಹೋನನಿಗೆ, ಬಾಷಾನಿನ ಅರಸ ಓಗನಿಗೆ, ಸೇರಿದ ಪ್ರಾಂತ್ಯಗಳಿಗೆ ಸ್ವಾಧೀನಪಡಿಸಿಕೊಂಡರಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಅವರಿಗೆ ರಾಜ್ಯಗಳನ್ನೂ, ಜನಾಂಗಗಳನ್ನೂ ವಶಪಡಿಸಿದಿರಿ. ಅವರಿಗೆ ಮೇರೆಗಳನ್ನು ವಿಭಾಗಿಸಿ ಕೊಟ್ಟಿರಿ. ಆಗ ಅವರು, ಹೆಷ್ಬೋನಿನ ಅರಸನಾದ ಸೀಹೋನನ ದೇಶವನ್ನೂ, ಬಾಷಾನಿನ ಅರಸನಾದ ಓಗನ ದೇಶವನ್ನೂ ಸ್ವಾಧೀನಮಾಡಿಕೊಂಡರು.