Nehemiah 9:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಮಕ್ಕಳು ದೇಶವನ್ನು ಸ್ವಾಧೀನಪಡಿಸಿಕೊಂಡರು; ಅಲ್ಲಿ ವಾಸಿಸಿದ್ದ ಕಾನಾನ್ಯರನ್ನು ಓಡಿಸಿದರು. ಅವರನ್ನು ಸೋಲಿಸುವಂತೆ ನೀನೇ ಮಾಡಿದೆ. ಆ ರಾಜ್ಯಗಳಿಗೆ, ರಾಜರುಗಳಿಗೆ ಅವರು ಮಾಡಬೇಕೆಂದಿದ್ದನ್ನು ಮಾಡುವಂತೆ ಅವರಿಗೇ ಅವಕಾಶಮಾಡಿಕೊಟ್ಟೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆ ದೇಶದಲ್ಲಿ ಹೋಗಿ ಸೇರಿಕೊಂಡು ಅದನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶನಿವಾಸಿಗಳಾಗಿದ್ದ ಕಾನಾನ್ಯರನ್ನು ಕುಗ್ಗಿಸಿ ಮನಸ್ಸಿಗೆ ಬಂದಂತೆ ನಡಿಸುವ ಹಾಗೆ ಆ ದೇಶದ ರಾಜರನ್ನೂ ಪ್ರಜೆಗಳನ್ನೂ ಅವರ ಕೈಗೆ ಒಪ್ಪಿಸಿದೆ.
Kannada BSI Bible 2016
ಹೀಗೆ ಮಕ್ಕಳು ಪ್ರವೇಶಿಸಿ ದೇಶವನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಕುಗ್ಗಿಸಿ ಅವರಿಗೆ ತಮ್ಮ ಇಚ್ಛೆಯ ಪ್ರಕಾರ ಮಾಡುವದಕ್ಕೆ ಅವರನ್ನೂ ಅವರ ಅರಸುಗಳನ್ನೂ ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆ ದೇಶದಲ್ಲಿ ಸೇರಿ ಅದನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶನಿವಾಸಿಗಳಾಗಿದ್ದ ಕಾನಾನ್ಯರನ್ನು ಕುಗ್ಗಿಸಿ ಮನಸ್ಸಿಗೆ ಬಂದಂತೆ ನಡಿಸುವ ಹಾಗೆ ಆ ದೇಶದ ರಾಜರನ್ನೂ ಪ್ರಜೆಗಳನ್ನೂ ಅವರ ಕೈಗೆ ಒಪ್ಪಿಸಿದಿ.
Kannada Bible (KNCL) BSI 2016
ಅಂತೆಯೇ ಸೇರಿ ಸ್ವಾಧೀನಮಾಡಿಕೊಂಡರು ಆ ನಾಡನು ಅವರಿಗಧೀನಪಡಿಸಿದಿರಿ ಅದರ ರಾಜರನು, ಪ್ರಜೆಗಳನು, ನಿವಾಸಿಗಳನು, ಆ ಕಾನಾನ್ಯರನು, ತಮಗಿಷ್ಟಾನುಸಾರ ನಡೆಸಲು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಇಸ್ರಾಯೇಲರು ಹೋಗಿ, ಆ ದೇಶವನ್ನು ಸ್ವಾಧೀನಮಾಡಿಕೊಂಡರು. ನೀವು ಆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಅವರ ಮುಂದೆ ಕುಗ್ಗಿಸಿ, ಅವರಿಗೆ ಸರಿತೋರಿದ ಪ್ರಕಾರ ಮಾಡುವುದಕ್ಕೆ ಅವರನ್ನೂ, ಅವರ ಅರಸರನ್ನೂ, ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿರಿ.