Nehemiah 9:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಅವರ ಶತ್ರುಗಳು ಅವರನ್ನು ಸದೆಬಡಿಯುವಂತೆ ಮಾಡಿದೆ. ವೈರಿಗಳು ಅವರಿಗೆ ತುಂಬಾ ಕಷ್ಟಕೊಟ್ಟರು. ಕಷ್ಟಬಂದಾಗ ನಮ್ಮ ಪೂರ್ವಿಕರು ನಿನಗೆ ಮೊರೆಯಿಟ್ಟರು. ಪರಲೋಕದಿಂದ ನೀನು ಅವರನ್ನು ಆಲೈಸಿದೆ. ನಿನ್ನ ಮಹಾಕರುಣೆಗನುಸಾರವಾಗಿ ನೀನು ಅವರ ಬಳಿಗೆ ಜನರನ್ನು ಕಳುಹಿಸಿ ಅವರನ್ನು ಅವರ ವೈರಿಗಳ ಕೈಗಳಿಂದ ರಕ್ಷಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ನೀನು ಅವರನ್ನು ದಂಡಿಸುವ ವಿರೋಧಿಗಳ ಕೈಗೆ ಒಪ್ಪಿಸಿದೆ. ಅವರು ತಮ್ಮ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಪಾರುಮಾಡಿದೆ.
Kannada BSI Bible 2016
ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನೀನು ಅವರನ್ನು ಬಾಧಿಸುವ ವಿರೋಧಿಗಳ ಕೈಗೆ ಒಪ್ಪಿಸಿದಿ. ಅವರು ಆ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಬಿಡಿಸಿದಿ.
Kannada Bible (KNCL) BSI 2016
ಎಂದೇ ನೀವಿತ್ತಿರಿ ಅವರನು ಕ್ರೂರ ಶತ್ರುಗಳ ವಶಕೆ ಆದರೆ ಸಂಕಟದಲಿ ಮೊರೆಯಿಡಲು, ಪರದಿಂದ ಕಿವಿಗೊಟ್ಟಿರವರಿಗೆ! ರಕ್ಷಕರನು ಕಳುಹಿಸಿದಿರಿ ಕರುಣಾತಿಶಯದಿಂದ ಈ ಪರಿ ಬಿಡಿಸಿದಿರಿ ವಿರೋಧಿಗಳ ಕೈಯಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನೀವು ಬಾಧಿಸುವ ವಿರೋಧಿಗಳ ಕೈಗೆ ಅವರನ್ನು ಒಪ್ಪಿಸಿದಿರಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿಮಗೆ ಮೊರೆಯಿಟ್ಟಾಗ, ನೀವು ಪರಲೋಕದಿಂದ ಕೇಳಿ, ನಿಮ್ಮ ಮಹಾ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವುದಕ್ಕೆ ರಕ್ಷಕರನ್ನು ಅವರಿಗೆ ಕಳುಹಿಸಿದಿರಿ.