Nehemiah 9:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಅವರನ್ನು ಎಚ್ಚರಿಸಿದೆ. ನನ್ನ ಕಡೆಗೆ ತಿರುಗಿರಿ ಎಂದು ಎಚ್ಚರಿಸಿದೆ. ಆದರೆ ಅವರು ಗರ್ವಿಷ್ಟರಾಗಿ ನಿನ್ನ ಆಜ್ಞೆಗಳನ್ನು ನಿರಾಕರಿಸಿದರು. ನಿನ್ನ ಆಜ್ಞೆಗಳನ್ನು ಅನುಸರಿಸುವ ಜನರು ನಿಜವಾಗಿಯೂ ಬಾಳುವರು. ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಮುರಿದುಹಾಕಿದರು; ಅವರು ಹಠಮಾರಿಗಳಾಗಿ ನಿನಗೆ ವಿಮುಖರಾದರು; ನಿನ್ನ ಮಾತುಗಳನ್ನು ಕೇಳದೆಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.
Kannada BSI Bible 2016
ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಎಚ್ಚರಿಸಿದಿ. ಆದರೂ ಅವರು ಲಾಲಿಸದೆ ಗರ್ವಿಗಳೂ ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು; ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿ ನ್ಯಾಯಗಳನ್ನು ಮೀರಿ ಪಾಪಮಾಡಿ ಹೆಗಲು ಕೊಡದೆ ಮೊಂಡಬಿದ್ದು ನಿನ್ನ ಮಾತನ್ನು ಕೇಳದೆ ಹೋದರು.
Kannada Bible (KNCL) BSI 2016
‘ಧರ್ಮೋಪದೇಶಕೆ ಮರಳಿ ಮನವೊಲಿದು ಬನ್ನಿ’ ಎಂದು ನೀವೆಷ್ಟೋ ಸಾರಿ ಅವರನ್ನೆಚ್ಚರಿಸಿದಿರಿ ಖಚಿತವಾಗಿ ಆದರೂ ಆಲಿಸಲಿಲ್ಲಾ ಗರ್ವಿಗಳು, ಅವಿಧೇಯರು, ಪಾಪಿಗಳು. ಜೀವಾಧಾರವಾದ ನಿಮ್ಮಾ ವಿಧಿನಿಯಮಗಳನು ಮೀರಿದರು ಮೊಂಡುಬಿದ್ದು ನಿಮ್ಮ ನೊಗಕೆ ಕೊರಳೊಡ್ಡದೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಅವರನ್ನು ನಿಮ್ಮ ನಿಯಮಕ್ಕೆ ಮರಳಿ ಬರುವ ಹಾಗೆ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಗರ್ವಪಟ್ಟು, ನಿಮ್ಮ ಆಜ್ಞೆಗಳನ್ನು ಅನುಸರಿಸದೆ ಹೋದರು. ನಿಮ್ಮ ವಾಕ್ಯಗಳನ್ನು ಕೈಗೊಳ್ಳುವುದರಿಂದ ಮನುಷ್ಯರು ಬದುಕುವರು ಎಂಬುದನ್ನು ಅವರು ತಿಳಿದಿದ್ದರೂ, ಆ ನಿಮ್ಮ ವಾಕ್ಯಗಳಿಗೆ ವಿರೋಧವಾಗಿ ಪಾಪಮಾಡಿ, ತಮ್ಮ ಹೃದಯವನ್ನು ಕಠಿಣಪಡಿಸಿಕೊಂಡು ನಿಮ್ಮ ಮಾತನ್ನು ಕೇಳದೆ ಹೋದರು.