Nehemiah 9:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀನು ನಮ್ಮ ಪೂರ್ವಿಕರ ವಿಷಯದಲ್ಲಿ ತಾಳ್ಮೆಯಿಂದಿದ್ದೆ. ನಿನ್ನ ವಿಷಯದಲ್ಲಿ ತಪ್ಪಾಗಿ ನಡೆದು ಕೊಳ್ಳಲು ಅನೇಕ ವರ್ಷಗಳವರೆಗೆ ಅವರನ್ನು ಬಿಟ್ಟುಬಿಟ್ಟೆ. ನೀನು ಅವರನ್ನು ನಿನ್ನ ಆತ್ಮನಿಂದ ಎಚ್ಚರಿಸಿದೆ; ಅವರನ್ನು ಎಚ್ಚರಿಸಲು ನಿನ್ನ ಪ್ರವಾದಿಗಳನ್ನು ಕಳುಹಿಸಿದೆ. ಆದರೆ ನಮ್ಮ ಪೂರ್ವಿಕರು ಕಿವಿಗೊಡಲಿಲ್ಲ. ಆದ್ದರಿಂದ ಪರರಾಜ್ಯದ ಜನರಿಗೆ ಅವರನ್ನು ಒಪ್ಪಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.
Kannada BSI Bible 2016
ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಅನೇಕವರ್ಷಗಳ ತನಕ ಅವರ ವಿಷಯದಲ್ಲಿ ತಾಳಿಕೊಂಡು ಪ್ರವಾದಿಗಳ ಮುಖಾಂತರ ಮಾತಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟಿ.
Kannada Bible (KNCL) BSI 2016
ತಾಳಿಕೊಂಡಿರಿ ಅವರನು ನೀವೆಷ್ಟೋ ವರ್ಷಗಳ ತನಕ ಎಚ್ಚರಿಸಿದಿರಿ ನಿಮ್ಮಾತ್ಮ ಪ್ರೇರಣೆಯಿಂದ, ಪ್ರವಾದಿಗಳ ಮೂಲಕ ಕಿವಿಗೊಡದಾ ಜನರನು ಹೊರದೂಡಿದಿರಿ ಅನ್ಯದೇಶದ ಪರಿಯಂತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಅನೇಕ ವರ್ಷ ಅವರನ್ನು ತಾಳಿಕೊಂಡಿರಿ. ನಿಮ್ಮ ಪ್ರವಾದಿಗಳ ಮುಖಾಂತರ ನಿಮ್ಮ ಆತ್ಮನಿಂದ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಕಿವಿಗೊಡದೆ ಇದ್ದುದರಿಂದ ನೀವು ಅವರನ್ನು ಅನ್ಯದೇಶದವರ ಕೈಯಲ್ಲಿ ಒಪ್ಪಿಸಿದಿರಿ.