Nehemiah 9:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೂ ನೀನು ದಯಾವಂತನು, ಅವರನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ಅವರನ್ನು ತೊರೆಯಲಿಲ್ಲ. ನೀನು ಅಂಥಾ ದಯಾಪರನಾದ ದೇವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀನು ದಯೆಯೂ ಕನಿಕರವೂ ಉಳ್ಳ ದೇವರಾಗಿರುವುರಿಂದ ನಿನ್ನ ಮಹಾಕೃಪಾನುಸಾರವಾಗಿ ಅವರನ್ನು ನಾಶಮಾಡಲಿಲ್ಲ, ಕೈಬಿಡಲೂ ಇಲ್ಲ.
Kannada BSI Bible 2016
ಆದರೂ ನೀನು ನಿನ್ನ ಅಧಿಕವಾದ ಕರುಣೆಯ ನಿಮಿತ್ತ ಅವರನ್ನು ಸಂಪೂರ್ಣ ನಾಶಮಾಡಿ ಬಿಡ ಲಿಲ್ಲ; ಅವರನ್ನು ಕೈಬಿಡಲೂ ಇಲ್ಲ. ಯಾಕಂದರೆ ನೀನು ಕೃಪೆಯೂ ಕರುಣೆಯುಳ್ಳ ದೇವರಾಗಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀನು ದಯೆಯೂ ಕನಿಕರವೂ ಉಳ್ಳ ದೇವರಾಗಿರುವದರಿಂದ ನಿನ್ನ ಮಹಾ ಕೃಪಾನುಸಾರವಾಗಿ ಅವರನ್ನು ನಾಶಮಾಡಿಬಿಡಲಿಲ್ಲ, ಕೈಬಿಡಲೂ ಇಲ್ಲ.
Kannada Bible (KNCL) BSI 2016
ಆದರೆ, ನೀವು ದಯಾಪೂರಿತರು, ಕರುಣಾಮಯ ದೇವರು! ನಿಮ್ಮ ಮಹಾಕೃಪಾನುಸಾರ, ಕೈಬಿಡಲಿಲ್ಲ, ನಾಶಮಾಡಲಿಲ್ಲ ಅವರನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನೀವು ನಿಮ್ಮ ಮಹಾ ಕರುಣೆಯಲ್ಲಿ ಅವರನ್ನು ನಾಶಮಾಡಲಿಲ್ಲ. ಅವರನ್ನು ಕೈಬಿಡಲೂ ಇಲ್ಲ. ಏಕೆಂದರೆ ನೀವು ಕೃಪೆಯೂ, ಕರುಣೆಯೂ ಉಳ್ಳ ದೇವರಾಗಿದ್ದೀರಿ.