Nehemiah 9:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫಸಲು ಇಲ್ಲಿ ಉತ್ತಮವಾಗಿದೆ. ನಾವು ಪಾಪಮಾಡಿದ್ದರಿಂದ ನಮ್ಮ ಸುಗ್ಗಿಯು ನಮ್ಮನ್ನಾಳುವ ರಾಜರಿಗೆ ಹೋಗಿಬಿಡುತ್ತದೆ. ಆ ರಾಜರುಗಳು ನಮ್ಮನ್ನೂ ನಮ್ಮ ದನಕರುಗಳನ್ನೂ ತಮ್ಮ ಹತೋಟಿಯೊಳಗೆ ಇಟ್ಟಿರುತ್ತಾರೆ. ನಮ್ಮನ್ನು ತಮಗೆ ಇಷ್ಟಬಂದಂತೆ ನಡಿಸುತ್ತಾರೆ. ಆದ್ದರಿಂದ ನಾವು ಬಹಳ ಸಂಕಟದಲ್ಲಿ ಸಿಕ್ಕಿಕೊಂಡಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಪಾಪಗಳ ನಿಮಿತ್ತವಾಗಿ ನಿನ್ನಿಂದ ನಮ್ಮ ಮೇಲೆ ನೇಮಿಸಲ್ಪಟ್ಟ ರಾಜರಿಗೆ ಈ ದೇಶದ ಹೇರಳವಾದ ಹುಟ್ಟುವಳಿಯು ಹೋಗುತ್ತಾ ಇದೆ. ದೈಹಿಕವಾಗಿ ನಮ್ಮ ಮೇಲೆ ಹಾಗೂ ನಮ್ಮ ಪಶುಗಳ ಮೇಲೆ ಅವರು ಮನಸ್ಸಿಗೆ ಬಂದಂತೆ ಅಧಿಕಾರ ನಡಿಸುತ್ತಿದ್ದಾರೆ. ನಾವು ಮಹಾಸಂಕಟದಲ್ಲಿದ್ದೇವೆ” ಎಂದು ಪ್ರಾರ್ಥಿಸಿದರು.
Kannada BSI Bible 2016
ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಕಾಯಗಳ ಮೇಲೆಯೂ ಪಶುಗಳ ಮೇಲೆಯೂ ಅವರು ಅಧಿಕಾರ ನಡಿಸುತ್ತಾರೆ. ನಾವು ಮಹಾಸಂಕಟದಲ್ಲಿರುತ್ತೇವೆ ಅಯ್ಯೋ ಎಂದು ಪ್ರಾರ್ಥಿಸಿದರು.
Kannada Bible (KNCL) BSI 2016
ನಮ್ಮ ಪಾಪದ ನಿಮಿತ್ತ ಅಧೀನರಾಗಿಸಿದಿರಿ ಅನ್ಯರಾಜರಿಗೆ ಈ ನಾಡಿನ ಸಿರಿಸಂಪತ್ತು ಹರಿದುಹೋಗುತ್ತಿದೆ ಆ ಅರಸರಿಗೆ ನಮ್ಮೊಡಲು, ದನಕರುಗಳು, ಈಡಾಗಿವೆ ಅವರ ದಬ್ಬಾಳಿಕೆಗೆ ಅಕಟಕಟ, ನಾವು ಸಿಕ್ಕಿಕೊಂಡಿದ್ದೇವೆ, ಮಹಾಸಂಕಟಕೆ!”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಪಾಪಗಳ ನಿಮಿತ್ತ ನೀವು ನಮ್ಮ ಮೇಲೆ ಇಟ್ಟ ಅರಸರಿಗೆ ಅದರ ಹುಟ್ಟುವಳಿ ಬಹಳವಾಗಿ ಹೋಗುತ್ತಿದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಮೇಲೆಯೂ, ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ. ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.