Nehemiah 9:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಕಾರಣಗಳಿಂದ ಶಾಶ್ವತವಾದ ಒಡಂಬಡಿಕೆಯನ್ನು ನಾವು ನಿನ್ನೊಂದಿಗೆ ಮಾಡುತ್ತೇವೆ. ಆ ಒಡಂಬಡಿಕೆಯನ್ನು ನಾವು ಬರವಣಿಗೆಯಲ್ಲಿ ಮಾಡುತ್ತೇವೆ. ನಮ್ಮ ನಾಯಕರೂ, ಯಾಜಕರೂ, ಲೇವಿಯರೂ ಅದಕ್ಕೆ ಸಹಿ ಮಾಡುವರು ಮತ್ತು ಅದಕ್ಕೆ ಮುದ್ರೆಯನ್ನು ಹಾಕುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಎಲ್ಲಾ ಕಾರಣಗಳನ್ನು ನಾವು ನೆನಪುಮಾಡಿಕೊಂಡು ಲೇಖನ ರೂಪವಾದ ಪ್ರತಿಜ್ಞೆಯನ್ನು ಸ್ಥಿರಮಾಡಿಕೊಂಡಿದ್ದೇವೆ. ಅದಕ್ಕೆ ನಮ್ಮ ಪ್ರಭುಗಳೂ, ಲೇವಿಯರೂ, ಯಾಜಕರೂ ಸಹಿಮಾಡಿ ಮುದ್ರೆ ಹಾಕಿರುವರು.
Kannada BSI Bible 2016
ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಎಲ್ಲಾ ಕಾರಣಗಳಿಂದ ನಾವು ಲೇಖನ ರೂಪವಾದ ಪ್ರತಿಜ್ಞೆಯನ್ನು ಮಾಡಿದೆವು. ಅದಕ್ಕೆ ನಮ್ಮ ಪ್ರಭುಗಳೂ ಲೇವಿಯರೂ ಯಾಜಕರೂ ಸಹಿಮಾಡಿ ಮುದ್ರೆಹಾಕಿದರು.
Kannada Bible (KNCL) BSI 2016
ಈ ಎಲ್ಲ ಕಾರಣಗಳಿಂದ ನಾವು ಲೇಖನ ರೂಪವಾದ ಪ್ರತಿಜ್ಞೆಯನ್ನು ಮಾಡಿದೆವು. ಅದಕ್ಕೆ ನಮ್ಮ ಮುಖಂಡರು, ಲೇವಿಯರು ಹಾಗು ಯಾಜಕರು ಸಹಿಮಾಡಿ, ಮುದ್ರೆಹಾಕಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇದೆಲ್ಲದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ. ನಮ್ಮ ಪ್ರಧಾನರೂ, ಲೇವಿಯರೂ, ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ,” ಎಂದು ಪ್ರಾರ್ಥಿಸಿದರು.