Nehemiah 9:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆನಂತರ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬುವವರು, “ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವನ್ನು ಸಲ್ಲಿಸಿರಿ. ಯೆಹೋವನೇ, ಸರ್ವಸ್ತುತಿ ಕೀರ್ತನೆಗಳಿಗೂ ಮೀಗಿಲಾಗಿರುವ ನಿನ್ನ ಮಹಾನಾಮಕ್ಕೆ ಮಹಿಮೆಯುಂಟಾಗಲಿ.
Kannada BSI Bible 2016
ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು - ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವಾಗಲಿ ಅನ್ನಿರಿ ಎಂದು ಹೇಳಿ - ಯೆಹೋವನೇ, ಸರ್ವಸ್ತುತಿಕೀರ್ತನೆಗಳಿಗೆ ವಿುಗಿಲಾಗಿರುವ ನಿನ್ನ ಮಹಾನಾಮಕ್ಕೆ ಕೊಂಡಾಟವಾಗಲಿ,
Kannada Bible (KNCL) BSI 2016
ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು, “ಏಳಿ, ನಮ್ಮ ದೇವರಾದ ಸರ್ವೇಶ್ವರನಿಗೆ ಯುಗಯುಗಕ್ಕೂ ಸ್ತುತಿಸ್ತೋತ್ರ ಎನ್ನಿ,” ಎಂದು ಹೇಳಿ ಹೀಗೆ ಪ್ರಾರ್ಥಿಸಿದರು: “ಸರ್ವೇಶ್ವರಾ, ಸ್ತುತಿಸ್ತೋತ್ರ ನಿಮ್ಮ ಮಹಿಮಾಮಯ ನಾಮಕೆ ಮಿಗಿಲಾದುದು ಆ ಶ್ರೀ ನಾಮ ಸರ್ವಸ್ತುತಿ ಕೀರ್ತನೆಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇವಿಯರಾದ ಯೇಷೂವ, ಕದ್ಮಿಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು ಜನರಿಗೆ: “ಏಳಿರಿ, ಎಂದೆಂದಿಗೂ ಏಕರೀತಿಯಾಗಿರುವ ನಿಮ್ಮ ದೇವರಾಗಿರುವ ಯೆಹೋವ ದೇವರನ್ನು ಸ್ತುತಿಸಿರಿ,” ಎಂದರು. ಅನಂತರ ಅವರು, “ಯೆಹೋವ ದೇವರೇ, ಸಕಲ ಸ್ತುತಿ ಆಶೀರ್ವಾದಗಳಿಗೆ ಉನ್ನತವಾದದ್ದು ನಿಮ್ಮ ಮಹಿಮೆಯುಳ್ಳ ಹೆಸರು.