Nehemiah 9:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ದೇವರಾಗಿರುವೆ. ಯೆಹೋವನೇ, ನೀನೊಬ್ಬನೇ ದೇವರು. ನೀನು ಆಕಾಶವನ್ನು ಉಂಟುಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. ಅದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಎಲ್ಲಾದಕ್ಕೂ ಜೀವಕೊಡುವಾತನು ನೀನೇ. ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ, ಅದರ ಸೈನ್ಯವನ್ನೂ, ಭೂಮಿಯನ್ನೂ ಅದರ ಮೇಲಿರುವುದನ್ನೂ, ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟುಮಾಡಿ, ಸಮಸ್ತ ಪ್ರಾಣಿಗಳಿಗೂ ಜೀವಕೊಡುವಾತನಾಗಿರುತ್ತೀ. ಆಕಾಶಸೈನ್ಯದವರು ನಿನ್ನನ್ನು ಆರಾಧಿಸುತ್ತಾರೆ.
Kannada BSI Bible 2016
ನೀನು ಒಬ್ಬನೇ ಕರ್ತನಾಗಿದ್ದೀ. ನೀನು ಆಕಾಶವನ್ನೂ ಆಕಾಶಗಳ ಆಕಾಶವನ್ನೂ ಅವು ಗಳ ಸಮಸ್ತ ಸೈನ್ಯವನ್ನೂ ಭೂಮಿಯನ್ನೂ ಅದರ ಲ್ಲಿರುವವುಗಳನ್ನೂ ಸಮುದ್ರಗಳನ್ನೂ ಅವುಗಳೊಳ ಗಿರುವ ಸಮಸ್ತವನ್ನೂ ಉಂಟು ಮಾಡಿದ್ದಲ್ಲದೆ ಅವು ಗಳನ್ನೆಲ್ಲಾ ಕಾಪಾಡುತ್ತೀ. ಇದಲ್ಲದೆ ಆಕಾಶಗಳ ಸೈನ್ಯವು ನಿನ್ನನ್ನು ಆರಾಧಿಸುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ ಅದರ ಸೈನ್ಯವನ್ನೂ ಭೂವಿುಯನ್ನೂ ಅದರ ಮೇಲಿರುವದನ್ನೂ ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟು ಮಾಡಿ ಸಮಸ್ತ ಪ್ರಾಣಿಗಳ ಜೀವಾಧಾರನಾಗಿರುತ್ತೀ.
Kannada Bible (KNCL) BSI 2016
ಹೇ ಸರ್ವೇಶ್ವರಾ, ನೀವೊಬ್ಬರೇ ದೇವರು; ಉನ್ನತೋನ್ನತ ಆಕಾಶವನು, ಅದರ ಪರಿವಾರಗಳನು ಬುವಿಯನು, ಕಡಲನು, ಅದರ ಸರ್ವಜಲಚರಗಳನು ಸೃಷ್ಟಿಸಿದಾತ ನೀವು; ಸಮಸ್ತ ಪ್ರಾಣಿಗಳಿಗು ಜೀವಾಧಾರ ನೀವು; ಆರಾಧಿಸುತ್ತವೆ ನಿಮ್ಮನು ಆಕಾಶದ ಪರಿವಾರಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಒಬ್ಬರೇ ದೇವರಾಗಿದ್ದೀರಿ. ನೀವು ಆಕಾಶವನ್ನೂ ಅದರ ಸಮಸ್ತ ಸೈನ್ಯವನ್ನೂ, ಭೂಮಿಯನ್ನೂ, ಅದರಲ್ಲಿರುವ ಪ್ರತಿಯೊಂದನ್ನೂ, ಸಮುದ್ರಗಳನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿದ್ದೀರಿ. ಅವುಗಳಿಗೆಲ್ಲಾ ಜೀವ ಕೊಡುವವರು ನೀವೇ. ಇದಲ್ಲದೆ ಆಕಾಶಗಳ ಸೈನ್ಯವು ನಿಮ್ಮನ್ನು ಆರಾಧಿಸುತ್ತವೆ.