Nehemiah 9:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನೇ ದೇವರಾದ ಯೆಹೋವನು. ಅಬ್ರಾಮನನ್ನು ನೀನೇ ಆರಿಸಿಕೊಂಡೆ. ಬಾಬಿಲೋನಿನ ಊರ್ ಎಂಬಲ್ಲಿಂದ ನೀನು ಅವನನ್ನು ನಡೆಸಿದೆ. ಅವನ ಹೆಸರನ್ನು ಬದಲಾಯಿಸಿ ಅಬ್ರಹಾಮನೆಂದು ಕರೆದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಅಬ್ರಾಮನನ್ನು ಆರಿಸಿಕೊಂಡು ಕಸ್ದೀಯರ ಊರ್ ಎಂಬ ಪಟ್ಟಣದಿಂದ ಬರಮಾಡಿ, ಅವನಿಗೆ ಅಬ್ರಹಾಮನೆಂಬ ಹೆಸರನ್ನು ಕೊಟ್ಟ ದೇವರು ನೀನೇ.
Kannada BSI Bible 2016
ನೀನು ಅಬ್ರಾಮನನ್ನು ಆದು ಕೊಂಡ ದೇವರಾಗಿರುವ ಕರ್ತನು. ನೀನು ಅವನನ್ನು ಊರ್‌ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ ಅವನಿಗೆ ಅಬ್ರಹಾಮ್‌ ಎಂದು ಹೆಸರಿಟ್ಟು
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕಾಶ ಸೈನ್ಯದವರು ನಿನಗೆ ಅಡ್ಡಬೀಳುತ್ತಾರೆ. ಯೆಹೋವನೇ, ಅಬ್ರಾಮನನ್ನು ಆರಿಸಿಕೊಂಡು ಕಸ್ದೀಯರ ಊರ್ ಎಂಬ ಪಟ್ಟಣದಿಂದ ಬರಮಾಡಿ ಅವನಿಗೆ ಅಬ್ರಹಾಮನೆಂಬ ಹೆಸರನ್ನು ಕೊಟ್ಟ ದೇವರು ನೀನೇ.
Kannada Bible (KNCL) BSI 2016
ಸರ್ವೇಶ್ವರಾ, ಅಬ್ರಾಮನನು ನೀವು ಆರಿಸಿಕೊಂಡಿರಿ ಬಾಬಿಲೋನಿನ ‘ಊರ್’ ನಗರದಿಂದ ಆತನನು ಬರಮಾಡಿದಿರಿ ದೇವರಾದ ನೀವೇ ಆತನಿಗೆ ‘ಅಬ್ರಹಾಮ’ ಎಂದು ಹೆಸರಿಟ್ಟಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಅಬ್ರಾಮನನ್ನು ಆಯ್ದುಕೊಂಡಿರುವ ಯೆಹೋವ ದೇವರು. ನೀವು ಅವನನ್ನು ಊರ್ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ, ಅವನಿಗೆ ಅಬ್ರಹಾಮ್ ಎಂದು ಹೆಸರಿಟ್ಟಿರಿ.