Nehemiah 9:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ನ್ಯಾಯವಂತನೂ ಪ್ರಾಮಾಣಿಕನೂ ಆಗಿದ್ದಾನೆಂದು ತಿಳಿದು ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡೆ. ಹಿತ್ತಿಯರ, ಕಾನಾನ್ಯರ, ಅಮೋರಿಯರ, ಪೆರಿಜ್ಜೀಯರ, ಯೆಬೂಸಿಯರ ಮತ್ತು ಗಿರ್ಗಾಷಿಯರ ನಾಡನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವುದಾಗಿ ವಾಗ್ದಾನ ಮಾಡಿದೆ. ನೀನು ನಿನ್ನ ವಾಗ್ದಾನವನ್ನು ನೆರವೇರಿಸಿದೆ. ಯಾಕೆಂದರೆ ನೀನು ಒಳ್ಳೆಯವನಾಗಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ, ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದರಿಂದ ನೀನು ನೀತಿಸ್ವರೂಪನು.
Kannada BSI Bible 2016
ಅವನ ಹೃದಯವು ನಿನ್ನ ಮುಂದೆ ನಂಬಿಕೆಯುಳ್ಳದ್ದೆಂದು ಕಂಡುಕೊಂಡು ಕಾನಾನ್ಯರೂ ಹಿತ್ತಿಯರೂ ಅಮೋರಿ ಯರೂ ಪೆರಿಜ್ಜೀಯರೂ ಯೆಬೂಸಿಯರೂ ಗಿರ್ಗಾಷಿ ಯರೂ ಇವರ ದೇಶವನ್ನು ಅವನ ಸಂತಾನಕ್ಕೆ ಕೊಡುವ ಹಾಗೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿ; ನೀನು ಸತ್ಯವಂತನಾಗಿರುವದರಿಂದ ನಿನ್ನ ವಾಕ್ಯಗಳನ್ನು ಈಡೇರಿಸಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ - ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದೀ; ನೀನು ಧರ್ಮಸ್ವರೂಪನೇ.
Kannada Bible (KNCL) BSI 2016
ಆತ ಪ್ರಾಮಾಣಿಕ ವ್ಯಕ್ತಿಯೆಂದು ಗುರುತಿಸಿದಿರಿ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಯೆಬೂಸಿಯರ, ಗಿರ್ಗಾಷಿಯರ ನಾಡನು ಆತನ ಸಂತಾನದವರಿಗೆ ವಾಗ್ದಾನ ಮಾಡಿದಿರಿ. ಅಂತೆಯೇ ಸತ್ವ ಸ್ವರೂಪರಾದ ನೀವು ಅದನು ಈಡೇರಿಸಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಹೃದಯವು ನಿಮ್ಮ ಮುಂದೆ ಪ್ರಾಮಾಣಿಕವಾದದ್ದೆಂದೂ ಗುರುತಿಸಿದಿರಿ. ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಯೆಬೂಸಿಯರೂ, ಗಿರ್ಗಾಷಿಯರೂ ಇವರ ದೇಶವನ್ನು, ಅಬ್ರಾಮನ ಸಂತಾನಕ್ಕೆ ಕೊಡುವಂತೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿರಿ. ನೀತಿವಂತರಾದ ನೀವು ನಿಮ್ಮ ವಾಗ್ದಾನವನ್ನು ಈಡೇರಿಸಿದಿರಿ.