Numbers 1:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎರಡನೆ ತಿಂಗಳಿನ ಮೊದಲನೆ ದಿನದಲ್ಲಿ ಎಲ್ಲಾ ಜನರು ಒಟ್ಟಾಗಿ ಸೇರಿಬಂದರು. ಜನರು ತಮ್ಮತಮ್ಮ ಕುಟುಂಬಗಳಿಗನುಸಾರವಾಗಿ, ಗೋತ್ರಗಳಿಗನುಸಾರವಾಗಿ ಪಟ್ಟಿ ಮಾಡಿಸಿದರು. ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಇಪ್ಪತ್ತು ವರ್ಷ ಹಾಗೂ ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮತಮ್ಮ ವಂಶಾವಳಿಯನ್ನು ಬರೆಯಿಸಿಕೊಂಡರು.
Kannada BSI Bible 2016
ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮೂಹದವರೆಲ್ಲರನ್ನೂ ಕೂಡಿಸಿದರು. ಆಗ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮ ತಮ್ಮ ವಂಶಾವಳಿಯನ್ನು ತಿಳಿಸಿ ಹೆಸರುಗಳನ್ನು ಬರಸಿಕೊಂಡರು.
Kannada Bible (KNCL) BSI 2016
ಎರಡನೆಯ ತಿಂಗಳಿನ ಮೊದಲನೆ ದಿನ ಜನಸಮೂಹವನ್ನು ಕೂಡಿಸಿದರು. ಇಪ್ಪತ್ತು ವರ್ಷ ಮೇಲ್ಪಟ್ಟ ವಯಸ್ಸಿನವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ, ಕುಟುಂಬಗಳ ಪ್ರಕಾರ ತಮ್ಮ ತಮ್ಮ ವಂಶಾವಳಿಯನ್ನು ತಿಳಿಸಿ ಹೆಸರುಗಳನ್ನು ನೊಂದಾಯಿಸಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಜನರು ತಮ್ಮ ಗೋತ್ರ ಮತ್ತು ಕುಟುಂಬಗಳ ಅನುಸಾರವಾಗಿ ತಮ್ಮ ವಂಶಾವಳಿಯನ್ನು ನೊಂದಾಯಿಸಿದರು. ಹಾಗೂ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಾದ ವಯಸ್ಸಿನವರ ಹೆಸರುಗಳನ್ನು ಒಬ್ಬೊಬ್ಬರಾಗಿ ಪಟ್ಟಿಮಾಡಲಾಯಿತು.