Numbers 1:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನೂ ಆರೋನನೂ ಇಸ್ರೇಲರಲ್ಲಿ ಎಲ್ಲಾ ಪುರುಷರನ್ನು ಲೆಕ್ಕಿಸಬೇಕು. ಇಸ್ರೇಲ್ ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸುಳ್ಳ ಪುರುಷರನ್ನು ಲೆಕ್ಕಿಸು. ಅವರನ್ನು ಅವರವರ ವಿಭಾಗಗಳಿಗೆ ಅನುಸಾರವಾಗಿ ಪಟ್ಟಿಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರನ್ನು ಸೈನ್ಯಸೈನ್ಯವಾಗಿ ನೀನೂ ಆರೋನನೂ ಲೆಕ್ಕಹಾಕಬೇಕು.
Kannada BSI Bible 2016
ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡುವವರೆಲ್ಲರನ್ನು ಅಂದರೆ ಇಪ್ಪತ್ತು ವರುಷದವರನ್ನೂ ಅದಕ್ಕೆ ಹೆಚ್ಚಾದ ಪ್ರಾಯವುಳ್ಳವ ರನ್ನೂ ಅವರ ಸೈನ್ಯಗಳ ಪ್ರಕಾರ ನೀನೂ ಆರೋನನೂ ಲೆಕ್ಕಮಾಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರನ್ನು ಸೈನ್ಯಸೈನ್ಯವಾಗಿ ನೀನೂ ಆರೋನನೂ ಲೆಕ್ಕಿಸಬೇಕು.
Kannada Bible (KNCL) BSI 2016
ಇಸ್ರಯೇಲರಲ್ಲಿ ಸೈನಿಕ ಸೇವೆ ಸಲ್ಲಿಸತಕ್ಕವರನ್ನು, ಅಂದರೆ ಇಪ್ಪತ್ತು ವರ್ಷ ಮೇಲ್ಪಟ್ಟ ವಯಸ್ಸುಳ್ಳ ಎಲ್ಲರನ್ನು ಸೈನ್ಯ ಸೈನ್ಯವಾಗಿ ಪಟ್ಟಿಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರಲ್ಲಿ ಸೈನಿಕ ಸೇವೆ ಸಲ್ಲಿಸತಕ್ಕವರನ್ನು ಅಂದರೆ, ಇಪ್ಪತ್ತು ವರ್ಷಕ್ಕಿಂತಲೂ ಹೆಚ್ಚಾದ ವಯಸ್ಸುಳ್ಳ ಎಲ್ಲರನ್ನು ಸೈನ್ಯಸೈನ್ಯವಾಗಿ ನೀನು ಮತ್ತು ಆರೋನನು ಪಟ್ಟಿಮಾಡಬೇಕು.