Numbers 1:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಸೇಫನ ಮಗನಾದ ಎಫ್ರಾಯೀಮ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
Kannada BSI Bible 2016
ಯೋಸೇಫನ ಮಕ್ಕಳಾದ ಎಫ್ರಾಯಾಮ್‌ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡ ತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 40,500 ಮಂದಿ.
Kannada Bible (KNCL) BSI 2016
ಜೋಸೆಫನಿಂದ ಹುಟ್ಟಿದವರೊಳಗೆ: ಎಫ್ರಾಯೀಮ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 40,500:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನ ಮಕ್ಕಳಾದ ಎಫ್ರಾಯೀಮನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.