Numbers 1:44 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆ, ಆರೋನ ಮತ್ತು ಇಸ್ರೇಲರ ಹನ್ನೆರಡು ಮಂದಿ ನಾಯಕರು ಈ ಜನರನ್ನು ಲೆಕ್ಕಿಸಿದರು. (ಪ್ರತಿಯೊಬ್ಬ ನಾಯಕನು ತನ್ನ ಕುಲದ ಪ್ರತಿನಿಧಿಯಾಗಿದ್ದನು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ, ಆರೋನನೂ ಮತ್ತು ಇಸ್ರಾಯೇಲಿನ ಹನ್ನೆರಡು ಕುಲಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ.
Kannada BSI Bible 2016
ಮೋಶೆ ಆರೋನರೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದವರು ಇವರೇ. ಇವರು ತಮ್ಮ ತಮ್ಮ ತಂದೆಗಳ ಮನೆಗಳಿಗೆ ಒಬ್ಬೊಬ್ಬನಂತೆ ಹನ್ನೆರಡು ಮಂದಿಯಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆರೋನರೂ ಕುಲಪ್ರತಿನಿಧಿಗಳಾದ ಆ ಹನ್ನೆರಡುಮಂದಿ ಪ್ರಾಧಾನರೂ ಲೆಕ್ಕಿಸಿದ ಇಸ್ರಾಯೇಲ್ಯರು ಇಷ್ಟು ಜನ.
Kannada Bible (KNCL) BSI 2016
ಮೋಶೆ, ಆರೋನ್ ಮತ್ತು ಕುಲಪ್ರತಿನಿಧಿಗಳಾದ ಆ ಹನ್ನೆರಡು ಪ್ರಧಾನರು ಎಣಿಸಿದ ಇಸ್ರಯೇಲರ ಸಂಖ್ಯೆ ಇಷ್ಟು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆ, ಆರೋನ್ ಮತ್ತು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ. ಪ್ರತಿಯೊಬ್ಬರೂ ತಮ್ಮ ತಮ್ಮ ಕುಟುಂಬವನ್ನು ಪ್ರತಿನಿಧಿಸುತ್ತಿದ್ದರು.