Numbers 1:51 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪವಿತ್ರ ಗುಡಾರವನ್ನು ತೆಗೆದುಕೊಂಡು ಹೋಗುವಾಗಲೆಲ್ಲಾ ಲೇವಿಯರೇ ಅದನ್ನು ಬಿಚ್ಚಬೇಕು, ಇಳಿಸುವಾಗಲೆಲ್ಲಾ ಲೇವಿಯರೇ ಅದನ್ನು ಹಾಕಬೇಕು. ಪವಿತ್ರ ಗುಡಾರವನ್ನು ನೋಡಿಕೊಳ್ಳುವವರು ಅವರೇ. ಲೇವಿ ಕುಲಕ್ಕೆ ಸೇರದ ಯಾವನಾದರೂ ಅದರ ಸಮೀಪಕ್ಕೆ ಬಂದರೆ, ಅವನಿಗೆ ಮರಣಶಿಕ್ಷೆಯಾಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.
Kannada BSI Bible 2016
ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊರಡುವಾಗ ಆ ಗುಡಾರವನ್ನು ಲೇವಿಯರೇ ಬಿಚ್ಚಬೇಕು; ಇಳಿಯುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.
Kannada Bible (KNCL) BSI 2016
ಹೊರಡುವಾಗ ಆ ಗುಡಾರವನ್ನು ಲೇವಿಯರೇ ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವದರ್ಶನ ಗುಡಾರವು ಹೊರಡುವಾಗ ಲೇವಿಯರು ಅದನ್ನು ತೆಗೆಯಲಿ. ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ. ಬೇರೆ ಯಾವನಾದರೂ ಸಮೀಪಿಸಿದರೆ ಅವನು ಸಾಯಬೇಕು.